ಟೆಲಿಗ್ರಾಮ್ ಆಪ್ ತೆರೆದು‌ ಲಕ್ಷಾಂತರ ರೂಪಾಯಿ ಹಣ ಕಳೆದುಕೊಂಡ ವ್ಯಕ್ತಿ

ಶಿವಮೊಗ್ಗ

ಶಿವಮೊಗ್ಗ,ಟೆಲಿಗ್ರಾಂ ಆ್ಯಪ್ ಮೂಲಕ ಹಣ ಹೂಡಿಕೆ ಮಾಡಿ ಹೆಚ್ಚಿನ ಲಾಭ ಗಳಿಸುವ ಆಮಿಷವೊಡ್ಡಿ ಲಕ್ಷಾಂತರ ರೂಪಾಯಿ ವಂಚಿಸಿರುವ ಘಟನೆ ಬೆಳಕಿಗೆ ಬಂದಿದೆ.

ಭದ್ರಾವತಿಯ ವ್ಯಕ್ತಿಯೊಬ್ಬರು ಟೆಲಿಗ್ರಾಂನಲ್ಲಿ ಜಾಹೀರಾತು ನೋಡಿ ಲಿಂಕ್ ಕ್ಲಿಕ್ ಮಾಡಿ ಮೋಸ ಹೋಗಿದ್ದಾರೆ.

ಟೆಲಿಗ್ರಾಂನಲ್ಲಿ ಲಿಂಕ್‌ ಕ್ಲಿಕ್‌ ಮಾಡಿದಾಗ, ಮಧುಮಿತಾ ಎಂಬ ಹೆಸರಿನ ಗ್ರೂಪ್ ಅಡ್ಮಿನ್ ಇವರನ್ನು ಸಂಪರ್ಕಿಸಿದ್ದಾರೆ. ತಾವು ಟಾಟಾ ಕಂಪನಿಯ ಪ್ರತಿನಿಧಿಗಳು ಎಂದು ತಿಳಿಸಿದ್ದಾರೆ. ಫ್ಯಾಷನ್ ಡಿಸೈನಿಂಗ್ ಉತ್ಪನ್ನಗಳನ್ನು ಖರೀದಿಸಿ ಟಾಸ್ಕ್ ಪೂರ್ಣಗೊಳಿಸಿದರೆ ಹೆಚ್ಚಿನ ಲಾಭ ನೀಡುವುದಾಗಿ ನಂಬಿಸಿದ್ದಾರೆ.

ಇದನ್ನು ನಂಬಿದ ಭದ್ರಾವತಿಯ ವ್ಯಕ್ತಿ ಹಂತ ಹಂತವಾಗಿ ಹಣ ಹೂಡಿಕೆ ಮಾಡಿದ್ದಾರೆ. ಡಿಸೆಂಬರ್ 18 ರಿಂದ ಡಿಸೆಂಬರ್ 25 ರ ಅವಧಿಯಲ್ಲಿ ಒಟ್ಟು ₹6,23,155 ವರ್ಗಾಯಿಸಿದ್ದಾರೆ. ತಾವು ಹೂಡಿಕೆ ಮಾಡಿದ ಹಣ ಮತ್ತು ಲಾಭ ವಾಪಸ್ ಬಾರದೇ ಇದ್ದಾಗ ತಾವು ಮೋಸ ಹೋಗಿರುವುದು ಅವರಿಗೆ ಅರಿವಾಗಿದೆ.

ಘಟನೆ ಸಂಬಂಧ ಶಿವಮೊಗ್ಗ ಸಿಇಎನ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದೆ.

Author