ಬೆಂಗಳೂರು | ಏಪ್ರಿಲ್ 23 ಮತ್ತು 24 ಕ್ಕೆ ಪರೀಕ್ಷೆ ,ವೇಳಾಪಟ್ಟಿ ಬಿಡುಗಡೆ

ಬೆಂಗಳೂರು

ಬೆಂಗಳೂರು, ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ನಡೆಸಲಾಗುವ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆಯ (ಕೆಸಿಇಟಿ) ದಿನಾಂಕವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರಕಟಿಸಿದೆ. ಏಪ್ರಿಲ್ 23 ಮತ್ತು 24 ರಂದು ಈ ಪರೀಕ್ಷೆಗಳು ನಡೆಯಲಿದೆ. ಅಭ್ಯರ್ಥಿಗಳು ಜನವರಿ 17 ರಿಂದ ಹೆಸರನ್ನು ನೋಂದಾಯಿಸಿಕೊಳ್ಳಬಹುದಾಗಿದೆ.

ಉನ್ನತ ಶಿಕ್ಷಣ ಸಚಿವ ಎಂ ಸಿ ಸುಧಾಕರ್ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಶರಣ ಪ್ರಕಾಶ ಪಾಟೀಲ್​, ಕರ್ನಾಟಕ ಪರೀಕ್ಷಾ ಪ್ರಾಧಿಕಾರದ 2026 ನೇ ಸಾಲಿನ ಪ್ರವೇಶ ಪರೀಕ್ಷೆಗಳ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.

ಈ ಬಾರಿಯ ಅರ್ಜಿ ಸಲ್ಲಿಕೆ ಪ್ರಕ್ರಿಯೆಯಲ್ಲಿ ಒಟಿಪಿ ಆಧಾರಿತ ವ್ಯವಸ್ಥೆ ಮುಂದುವರಿಯಲಿದೆ.ಪ್ರಮುಖ ಅಂಶಅಭ್ಯರ್ಥಿಗಳು ಲಾಗಿನ್ ಪ್ರಕ್ರಿಯೆಯ ನಂತರ ತಮ್ಮ ಅರ್ಜಿಯ ವಿವರಗಳೊಂದಿಗೆ ಒಟಿಪಿ ಸಲ್ಲಿಸುವುದು ಕಡ್ಡಾಯವಾಗಿದೆ. ಪರೀಕ್ಷಾ ಅಕ್ರಮಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಭ್ಯರ್ಥಿಗಳು ಅರ್ಜಿ ಸಲ್ಲಿಸುವಾಗ ನೈಜ ಸಮಯದಲ್ಲಿ ತಮ್ಮ ಭಾವಚಿತ್ರವನ್ನು ಅಪ್‌ಲೋಡ್ ಮಾಡಬೇಕಾಗುತ್ತದೆ.

ಸಿಇಟಿ ಪ್ರಕ್ರಿಯೆಗೆ ಸಂಬಂಧಿಸಿದಂತೆ ನೋಂದಣಿ, ಅರ್ಜಿ ಸಲ್ಲಿಕೆ ಮತ್ತು ತಿದ್ದುಪಡಿಗಳ ಬಗ್ಗೆ ಅಭ್ಯರ್ಥಿಗಳಿಗೆ ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ‘ಸಿಇಟಿ ದಿಕ್ಕೂಚಿ’ ಎಂಬ ಕೈಪಿಡಿ ನೀಡಲಾಗುತ್ತಿದೆ.ಈ ದಿಕ್ಕೂಚಿಯು ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆಯ ಹಂತ ಹಂತದ ಮಾಹಿತಿಯನ್ನು ನೀಡಲಿದ್ದು, ಗೊಂದಲಗಳಿಲ್ಲದೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಲು ಸಹಕಾರಿಯಾಗಲಿದೆ.

Author