ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಆನಂದಪುರ, ಪೊಲೀಸ್ ಠಾಣಾ ವ್ಯಾಪ್ತಿಯ ಮಸ್ಕಲಬೈಲು ಗ್ರಾಮದಲ್ಲಿ ಬೈಕಿನಲ್ಲಿ ತೆರಳುತ್ತಿದ್ದವರ ಮೇಲೆ ಅಜ್ಞಾತ ವ್ಯಕ್ತಿಯೊಬ್ಬ ಖಾರದ ಪುಡಿ ಎರಚಿ, ಮಹಿಳೆಯ ತಲೆಗೆ ಸ್ಟೀಲ್ ರಾಡ್‌ನಿಂದ ಹಲ್ಲೆ ನಡೆಸಿದ ಘಟನೆ ವರದಿಯಾಗಿತ್ತು.
ಘಟನೆ ಸಂಬಂಧ ಆನಂದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪಿಎಸೈ ಪ್ರವೀಣ್ ಎಸ್ ಪಿ ನೇತ್ರತ್ವದಲ್ಲಿ ತನಿಖೆ ನಡೆಸಲಾಗಿದ್ದು, ಪ್ರಕರಣ ಸಂಬಂಧ ಆರೋಪಿ ಗೋವಿಂದ. ವೈ (24) ಮತ್ತು ಘಟನೆಗೆ ಕುಮ್ಮಕ್ಕು ನೀಡಿದ ಹಿನ್ನಲೆಯಲ್ಲಿ ಕಿರಣ್ ಕುಮಾರ್ (32) ಸೊರಬ ಮೂಲದ ಇಬ್ಬರು ಆರೋಪಿಗಳ ಹೆಡೆಮುರಿ ಕಟ್ಟಿ, ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಪೊಲೀಸರು ಒಳಪಡಿಸಿದ್ದಾರೆ.
ಈ ಒಂದು ಕಾರ್ಯಾಚರಣೆಯಲ್ಲಿ ಭಾಗವಹಿಸಿದ ಪೊಲೀಸ್ ತಂಡದ ಹಾಗೂ ಸಿಬ್ಬಂದಿಗಳಿಗೆ ಶಿವಮೊಗ್ಗ ಜಿಲ್ಲಾ ಎಸ್ಪಿ ಅವರು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.



