ಶಿವಮೊಗ್ಗ | ಗುರುಪುರ, ವೆಂಕಟೇಶ ನಗರದ ನೀರಿನ ಸಮಸ್ಯೆ, ಸ್ವಚ್ಛತೆಗೆ ತಕ್ಷಣದ ಕ್ರಮಕ್ಕೆ ಸೂಚಿಸಿದ ಶಾಸಕ ಚನ್ನಬಸಪ್ಪ

ಶಿವಮೊಗ್ಗ

​ಶಿವಮೊಗ್ಗ,ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ವಾರ್ಡ್ ನಂಬರ್ 5ರ ಗುರುಪುರ ವೆಂಕಟೇಶ ನಗರಕ್ಕೆ ಇಂದು ಬೆಳಿಗ್ಗೆ ಶಾಸಕರಾದ ಎಸ್ ಎನ್ ಚನ್ನಬಸಪ್ಪ ಅವರು ಭೇಟಿ ನೀಡಿ ಸಾರ್ವಜನಿಕರ ಕುಂದುಕೊರತೆಗಳನ್ನು ಆಲಿಸಿದರು.​

ಬಡಾವಣೆಯಲ್ಲಿ ಪ್ರವಾಸ ಕೈಗೊಂಡ ಸಂದರ್ಭದಲ್ಲಿ ನಾಗರಿಕರು ಎದುರಿಸುತ್ತಿರುವ ಕುಡಿಯುವ ನೀರಿನ ಪೂರೈಕೆಯ ವ್ಯತ್ಯಯ ಹಾಗೂ ಚರಂಡಿ ನೈರ್ಮಲ್ಯದ ಸಮಸ್ಯೆಗಳ ಕುರಿತು ಸ್ಥಳೀಯ ನಿವಾಸಿಗಳು ಅಹವಾಲು ಸಲ್ಲಿಸಿದರು. ಈ ದೂರುಗಳಿಗೆ ತಕ್ಷಣವೇ ಸ್ಪಂದಿಸಿದ ಅವರು, ಸ್ಥಳದಲ್ಲಿದ್ದ ಮಹಾನಗರ ಪಾಲಿಕೆ ಅಧಿಕಾರಿಗಳೊಂದಿಗೆ ಚರ್ಚಿಸಿ , ನೀರಿನ ಪೂರೈಕೆ ಸಮರ್ಪಕಗೊಳಿಸಲು ಹಾಗೂ ಸ್ವಚ್ಛತಾ ಕಾರ್ಯಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಲು ಸೂಚಿಸಿದರು.

ಭೇಟಿಯ ಸಂದರ್ಭದಲ್ಲಿ ಬಿಜೆಪಿ ನಗರಾಧ್ಯಕ್ಷರಾದ ಮೋಹನ್ ರೆಡ್ಡಿ, ಪ್ರಮುಖರಾದ ಮಲ್ಲಿಕಾರ್ಜುನ್, ಶ್ರೀ ಹರೀಶ್, ಆನಂದ್, ನಿತಿನ್, ಮಾಲತೇಶ್ ಸೇರಿದಂತೆ ಕಾರ್ಯಕರ್ತರು ಹಾಗೂ ಸ್ಥಳೀಯ ನಿವಾಸಿಗಳು ಉಪಸ್ಥಿತರಿದ್ದರು.

Author