ಶಿವಮೊಗ್ಗ | ಅತಿಥಿ ಉಪನ್ಯಾಸಕರ ವೇತನ ಹೆಚ್ಚಿಸುವಂತೆ ಶಿಕ್ಷಣ ಸಚಿವರಿಗೆ ಮನವಿ

ಶಿವಮೊಗ್ಗ

ಶಿವಮೊಗ್ಗ,ಇಂದು ಸರ್ಕಾರಿ ಕಾಲೇಜುಗಳ ಪದವಿ ಪೂರ್ವ ಅತಿಥಿ ಉಪನ್ಯಾಸಕರ ಸಂಘಟನೆಯಿಂದ ಶಿವಮೊಗ್ಗ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಹರೀಶ್ ಅವರ ನಿಯೋಗವು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ, ಅವರ ಸ್ವಗ್ರಾಮ ಕುಬಟೂರಿನಲ್ಲಿ ಭೇಟಿ ಮಾಡಿ ಸರ್ಕಾರಿ ಪದವಿ ಪೂರ್ವ ಕಾಲೇಜು ಅತಿಥಿ ಉಪನ್ಯಾಸಕರ ವೇತನವನ್ನು ಕನಿಷ್ಠ 30,000 ಗೆ ಹೆಚ್ಚಳ ಮಾಡುವಂತೆ ಮನವಿ ಪತ್ರವನ್ನು ಸಲ್ಲಿಸಿದರು.

ಈ ಸಂದರ್ಭದಲ್ಲಿ ಶ್ರೀ ಮತಿ ಆಶಾ ಮತ್ತು ಚಂದ್ರಕಲಾ ವಾಣಿಜ್ಯ ವಿಭಾಗ ಹಾಗೂ ಶೃತಿ ಅರ್ಥಶಾಸ್ತ್ರ ವಿಭಾಗದ ಉಪನ್ಯಾಸಕಿಯರು ಉಪಸ್ಥಿತರಿದ್ದರು.

Author