ಶಿವಮೊಗ್ಗ | ಜಿಲ್ಲಾ NSUI ವತಿಯಿಂದ ರಾಷ್ಟ್ರೀಯ ಯುವ ದಿನ ಆಚರಣೆ

ಶಿವಮೊಗ್ಗ

ಶಿವಮೊಗ್ಗ, ಜಿಲ್ಲಾ NSUI ವತಿಯಿಂದ ಸ್ವಾಮಿ ವಿವೇಕಾನಂದರ 163ನೇ ದಿನಾಚರಣೆಯನ್ನು ನಗರದ ಮಹಾವೀರ ವೃತ್ತದಲ್ಲಿ ಸ್ವಾಮಿ ವಿವೇಕಾನಂದರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ವಿದ್ಯಾರ್ಥಿಗಳಿಗೆ ಸಿಹಿ ಹಂಚು ಮುಖಾಂತರ ಆಚರಿಸಲಾಯಿತು.

ಶಿವಮೊಗ್ಗ ಜಿಲ್ಲೆಯ ಯುವ ಪ್ರತಿಭೆಗಳನ್ನು ಗುರುತಿಸಿ ಸನ್ಮಾನ ಮಾಡಲಾಯಿತು, ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪ್ರಸನ್ನ ಕುಮಾರ್ ಮಾತನಾಡಿ ವಿದ್ಯಾರ್ಥಿಗಳು ಸ್ವಾಮಿ ವಿವೇಕಾನಂದರ ಆದರ್ಶಗಳನ್ನು ತಮ್ಮ ಜೀವನದಲ್ಲಿ ರೂಪಿಸಿಕೊಳ್ಳಬೇಕು ಎಂದು ಹೇಳಿದರು .

ನಂತರ ಜವಳಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಚೇತನ್ ಕೆ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಗುರಿಯನ್ನು ಮುಟ್ಟುವ ತನಕ ನಿಲ್ಲಬಾರದು ತಮ್ಮ ಗುರಿಯೆಡೆಗೆ ಸಾಗುವುದನ್ನು ರೂಢಿಸಿಕೊಳ್ಳಬೇಕು ಎಂದರು.ಮಹಾನಗರ ಪಾಲಿಕೆಯ ಮಾಜಿ ಸದಸ್ಯೆ ಯಮುನಾ ರಂಗೇಗೌಡ, ವಿವೇಕಾನಂದರ ಆದರ್ಶಗಳನ್ನು ಅಮೆರಿಕದ ಮಾಜಿ ಅಧ್ಯಕ್ಷರಾದ ಬರಾಕ್ ಒಬಾಮ ಭಾರತ ದೇಶಕ್ಕೆ ಬಂದ ಸಂದರ್ಭದಲ್ಲಿ ಸ್ಮರಿಸಿದರು ಎಂದು ವಿದ್ಯಾರ್ಥಿಗಳಿಗೆ ನೆನಪಿಸಿದರು.

ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶ್ವೇತಾ ಬಂಡಿ, ಮಾತನಾಡಿ ಸ್ವಾಮಿ ವಿವೇಕಾನಂದರಿಗೆ ನವ ಭಾರತದ ಬಗ್ಗೆ ಇದ್ದ ಪರಿಕಲ್ಪನೆ ಹಾಗೂ ಸ್ವಾಮಿ ವಿವೇಕಾನಂದರವರ ವಾಕ್ಚಾತುರ್ಯ ದೇಶಕ್ಕೆ ವಿವೇಕಾನಂದರ ಕೊಡುಗೆ ಬಗ್ಗೆ ವಿದ್ಯಾರ್ಥಿಗಳಿಗೆ ತಿಳಿಸಿದರು.

ಈ ಸಂದರ್ಭದಲ್ಲಿ ಹಾಪ್ ಕಾಮ್ಸ್ ಅಧ್ಯಕ್ಷ ವಿಜಯಕುಮಾರ್, ಜಿಲ್ಲಾ ಕಾಂಗ್ರೆಸ್ ಮುಖಂಡ ರವಿಕುಮಾರ್, ಕಾಂಗ್ರೆಸ್ ಯುವ ಮುಖಂಡರಾದ ಸಿಜಿ ಮಧುಸೂದನ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಹರ್ಷಿತ್ ಗೌಡ, NSUI ಜಿಲ್ಲಾಧ್ಯಕ್ಷರಾದ ವಿಜಯಕುಮಾರ್, ಮಹಿಳಾ ಕಾಂಗ್ರೆಸ್ ಉತ್ತರ ಬ್ಲಾಕ್ ಅಧ್ಯಕ್ಷರಾದ ಭಾರತಿ ರಾಮಕೃಷ್ಣ, ಗ್ಯಾರಂಟಿ ಸದಸ್ಯರಾದ ಅರ್ಚನಾ, ಕಾಂಗ್ರೆಸ್ ಮುಖಂಡರಾದ ನಜಾಮ್, ಯುವ ಕಾಂಗ್ರೆಸ್ ಅಧ್ಯಕ್ಷರಾದ ಚರಣ್ , ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಗಿರೀಶ್, NSUI ಕಾರ್ಯಧ್ಯಕ್ಷರಾದ ರವಿ ಕಾಟಿಕೆರೆ NSUI ನಗರಧ್ಯಕ್ಷರಾದ ರವಿಕುಮಾರ್ ಪದಾಧಿಕಾರಿಗಳಾದ ಚಂದ್ರೋಜಿ ರಾವ್ ವರುಣ್ ವಿ ಪಂಡಿತ್, ಸುಭಾನ್,ಆದಿತ್ಯ,ಫರಾಜ್, ಆಕಾಶ್, ವಿಕಾಸ್, ಉಲ್ಲಾಸ್, ಪಾಲ್ಗೊಂಡಿದ್ದರು.

Author