ಬೆಳಗಾವಿ, ಗೋವಾದಿಂದ ಮಹಾರಾಷ್ಟ್ರಕ್ಕೆ ಸಾಗಿಸುತ್ತಿದ್ದ 400 ಕೋಟಿ ರೂಪಾಯಿಗೂ ಅಧಿಕ ಮೌಲ್ಯದ ನಿಷೇಧಿತ 2,000 ರೂ. ಮುಖಬೆಲೆಯ ನೋಟುಗಳಿದ್ದ ಎರಡು ಕಂಟೇನರ್ಗಳನ್ನ ಬೆಳಗಾವಿಯ ಚೋರ್ಲಾ ಘಾಟ್ನಲ್ಲಿ ಹೈಜಾಕ್ ಮಾಡಲಾಗಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.
ಈ ದರೋಡೆ ಪ್ರಕರಣ ಅಂತಾರಾಜ್ಯ ಮಟ್ಟದ್ದಾಗಿದ್ದು, ಕರ್ನಾಟಕ, ಗೋವಾ ಹಾಗೂ ಮಹಾರಾಷ್ಟ್ರ 3 ರಾಜ್ಯಗಳ ಪೊಲೀಸರು ವಿಶೇಷ ತನಿಖಾ ತಂಡದ ಮೂಲಕ ತನಿಖೆ ನಡೆಸುತ್ತಿದ್ದಾರೆ.
ದರೋಡೆ ನಡೆದಿದ್ದು ಯಾವಾಗ
ಗೋವಾದಿಂದ (Goa) ಮಹಾರಾಷ್ಟ್ರಕ್ಕೆ ಸಾಗಿಸಲಾಗುತ್ತಿದ್ದ ಸುಮಾರು 400 ಕೋಟಿ ರೂ. ನಗದು ತುಂಬಿದ್ದ ಎರಡು ಕಂಟೇನರ್ಗಳು, ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಚೋರ್ಲಾ ಘಾಟ್ ಪ್ರದೇಶದಲ್ಲಿ ಹೈಜಾಕ್ ಆಗಿರುವುದು ತಡವಾಗಿ ಬೆಳಕಿಗೆ ಬಂದಿದೆ.
2025ರ ಅಕ್ಟೋಬರ್ 16 ರಂದು ಈ ದರೋಡೆ ನಡೆದಿದೆ. ಘಟನೆ ನಡೆದು ಹಲವಾರು ತಿಂಗಳ ನಂತರ ಪ್ರಕರಣ ಬೆಳಕಿಗೆ ಬಂದಿರುವುದು ಮೂರು ರಾಜ್ಯಗಳ ಪೊಲೀಸರಲ್ಲಿ ತೀವ್ರ ಅಚ್ಚರಿ ಉಂಟುಮಾಡಿದೆ. ಜೊತೆಗೆ ಅನೇಕ ಅನುಮಾನಗಳಿಗೆ ಕಾರಣವಾಗಿದೆ.



