ಶಿವಮೊಗ್ಗ | ಭದ್ರಾಪುರ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ

ಶಿವಮೊಗ್ಗ

ಶಿವಮೊಗ್ಗ ತಾಲ್ಲೂಕಿನ ಕೂಡ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಭದ್ರಾಪುರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 77ನೇ ಗಣರಾಜ್ಯೋತ್ಸವ ದಿನಾಚರಣೆಯನ್ನು ಸಡಗರ ಸಂಭ್ರಮದಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಬಿ.ಎಸ್. ಹರೀಶ್ ಅವರು ಧ್ವಜಾರೋಹಣ ನೆರವೇರಿಸಿದರು. ತಾಲ್ಲೂಕು ಗ್ಯಾರಂಟಿ ಸಮಿತಿ ಸದಸ್ಯರಾದ ಬಿ.ಆರ್. ವಾಗೀಶ್ ಮಾತನಾಡಿ, ಸ್ವಾತಂತ್ರ್ಯ, ಸಮಾನತೆ, ಸಹೋದರ ಭಾವನೆ ಹಾಗೂ ಸಾಮಾಜಿಕ ನ್ಯಾಯವನ್ನು ನಮ್ಮ ಸಂವಿಧಾನ ನಮಗೆ ನೀಡಿದೆ. ಕಳೆದ ವಾರ ನಮ್ಮ ಗ್ರಾಮದಲ್ಲಿ ನಡೆದ ಶ್ರೀ ಗುಳ್ಳಮ್ಮ ದೇವಿ ಜಾತ್ರಾ ಮಹೋತ್ಸವದಲ್ಲಿ ಜಾತಿ-ಮತ ಭೇದವಿಲ್ಲದೆ ಎಲ್ಲರೂ ಒಂದಾಗಿ ಸಂಭ್ರಮದಿಂದ ಹಬ್ಬ ಆಚರಿಸಿದುದು ಸಂವಿಧಾನ ನಮಗೆ ನೀಡಿದ ಸ್ವಾತಂತ್ರ್ಯದ ಪ್ರತೀಕವಾಗಿದೆ ಎಂದು ಹೇಳಿದರು.

ಇದೇ ಜನವರಿ 26 ಸಂಗೊಳ್ಳಿ ರಾಯಣ್ಣ ಹುತಾತ್ಮರಾದ ದಿನವೆಂಬುದನ್ನು ನಾವು ಎಲ್ಲರೂ ನೆನಪಿಸಿಕೊಳ್ಳಬೇಕು ಎಂದು ಹೇಳಿದರು.ಮುಖ್ಯ ಶಿಕ್ಷಕರಾದ ರಮೇಶ್ ಪಿ.ಕೆ. ಅವರು ಸಂವಿಧಾನದ ಆಶಯಗಳನ್ನು ಸಾರುವ ಕವಿತೆಯನ್ನು ವಾಚಿಸಿದರು.

ಶಾಲಾಭಿವೃದ್ಧಿ ಸಮಿತಿ ಉಪಾಧ್ಯಕ್ಷೆ ಅನ್ನಪೂರ್ಣ, ಸದಸ್ಯರಾದ ಸಿದ್ದಪ್ಪ, ಪ್ರಭಾಕರ್, ಜಗಧೀಶಪ್ಪ, ಗ್ರಾಮ ಪಂಚಾಯಿತಿ ಸದಸ್ಯ ಕುಮಾರಪ್ಪ, ಮಾಜಿ ಅಧ್ಯಕ್ಷ ಭರಮೇಶಪ್ಪ ಗ್ರಾಮದ ಮುಖಂಡ ಮೈಲಾರಪ್ಪ, ಅಂಗನವಾಡಿ ಕಾರ್ಯಕರ್ತೆ ಉಮಾವತಿ, ಅಡುಗೆ ಸಿಬ್ಬಂದಿ ನೇತ್ರಾವತಿ, ಕವಿತಾ ಹಾಗೂ ಶಿಲ್ಪ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಶಿಕ್ಷಕಿಯರಾದ ವಿನುತಾ ಮತ್ತು ವನಿತಾ ಅವರು ದೇಶಭಕ್ತಿ ಗೀತೆಗಳನ್ನು ಹಾಡಿ ಕಾರ್ಯಕ್ರಮಕ್ಕೆ ವಿಶೇಷ ಛಾಯೆ ನೀಡಿದರು. ಕೃಷ್ಣಮೂರ್ತಿ ಸ್ವಾಗತಿಸಿ, ದೀಪಾ ವಂದಿಸಿದರು.

Author