ಶಿವಮೊಗ್ಗ, ನಗರದ ಕೆಎಸ್ಆರ್ಟಿಸಿ (KSRTC) ಬಸ್ ನಿಲ್ದಾಣದಲ್ಲಿ ಬಸ್ ಹತ್ತುವ ವೇಳೆ ಉಂಟಾದ ಜನದಟ್ಟಣೆಯನ್ನು ಬಳಸಿಕೊಂಡ ಕಳ್ಳರು, ಮಹಿಳೆಯೊಬ್ಬರ ವ್ಯಾನಿಟಿ ಬ್ಯಾಗ್ನಲ್ಲಿದ್ದ ಸುಮಾರು ₹70,000 ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಿದ್ದಾರೆ.
ದಾವಣಗೆರೆ ಮೂಲದ ಜ್ಯೋತಿ ಎಂಬುವವರು ಶಿವಮೊಗ್ಗ ಬಸ್ ನಿಲ್ದಾಣದಿಂದ ಬಸ್ ಹತ್ತಲು ಪ್ರಯತ್ನಿಸುತ್ತಿದ್ದರು. ಈ ಸಮಯ ಪ್ರಯಾಣಿಕರ ಸಂಖ್ಯೆ ಹೆಚ್ಚಿತ್ತು. ಜ್ಯೋತಿ ಅವರು ಬಸ್ ಹತ್ತುವಾಗ ವ್ಯಾನಿಟಿ ಬ್ಯಾಗ್ನ ಜಿಪ್ ತೆರೆದು ಒಳಗಿದ್ದ 10 ಗ್ರಾಂ ತೂಕದ ಚಿನ್ನದ ನೆಕ್ಲೇಸ್, 5 ಗ್ರಾಂ ತೂಕದ ಚಿನ್ನದ ಕಿವಿಯ ಓಲೆಗಳನ್ನು ಕಳ್ಳತನ ಮಾಡಿದ್ದಾರೆ. ಬಸ್ ಹತ್ತಿದ ನಂತರ ಬ್ಯಾಗ್ ಪರಿಶೀಲಿಸಿದಾಗ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ ಎಂದು ದೂರಿನಲ್ಲಿ ಆರೋಪಿಸಿದ್ದಾರೆ.
ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



