ಶಿವಮೊಗ್ಗ | ಗಾಂಜಾ ಸಂಗ್ರಹ ; ಆರೋಪಿ ಬಂಧನ

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಬೊಮ್ಮನಕಟ್ಟೆ ಗ್ರಾಮದಲ್ಲಿ ಅಕ್ರಮವಾಗಿ ಮಾದಕ ವಸ್ತು ಗಾಂಜಾವನ್ನು ಸಂಗ್ರಹಿಸಿ ಇಟ್ಟಿರುವ ಕುರಿತು ಖಚಿತ ಮಾಹಿತಿಯ ಮೇರೆಗೆ, ದಿನಾಂಕ 28-01-2026ರಂದು ಪೇಪರ್ ಟೌನ್ ಪೊಲೀಸ್ ಠಾಣೆಯ ಪಿಎಸ್‌ಐ ಹಾಗೂ ಸಿಬ್ಬಂದಿಗಳ ತಂಡ ದಾಳಿ ನಡೆಸಿದೆ.

ದಾಳಿಯ ವೇಳೆ, ಹುಲ್ಲಿನ ಬಣವೆಯಲ್ಲಿ ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ 8 ಕೆಜಿ 60 ಗ್ರಾಂ ತೂಕದ ಗಾಂಜಾವನ್ನು ಪತ್ತೆಹಚ್ಚಲಾಗಿದ್ದು, ಇದರ ಅಂದಾಜು ಮೌಲ್ಯ ₹4,03,000/- ಆಗಿರುತ್ತದೆ.

ಈ ಸಂಬಂಧ ಅಬ್ದುಲ್ ಖದ್ದೂಸ್ ಎಂಬ ಆರೋಪಿಯನ್ನು ಪೊಲೀಸರು ದಸ್ತಗಿರಿ ಮಾಡಿದ್ದಾರೆ.

ಆರೋಪಿಯಿಂದ ವಶಪಡಿಸಿಕೊಂಡ ಮಾದಕ ವಸ್ತುವನ್ನು ಜಪ್ತಿ ಮಾಡಿಕೊಂಡು, ಪೇಪರ್ ಟೌನ್ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 0016/2026 ಅಡಿಯಲ್ಲಿ NDPS ಕಾಯ್ದೆಯ ಕಲಂ 8(c), 20(b)(ii)(B) ರೀತ್ಯಾ ಪ್ರಕರಣ ದಾಖಲಿಸಲಾಗಿದ್ದು, ಮುಂದಿನ ತನಿಖೆಯನ್ನು ಪೊಲೀಸರು ಕೈಗೊಂಡಿದ್ದಾರೆ.

Author