ಶಿವಮೊಗ್ಗ, ಪೂರ್ವ ಸಂಚಾರ ಪೊಲೀಸ್ ಠಾಣೆಯ ಎ ಎಸ್ ಐ ರಾಜಕುಮಾರ್ ಜಿಲ್ಲಾ ಪೊಲೀಸ್ ಇಲಾಖೆಯಲ್ಲಿ ಸುಧೀರ್ಘವಾಗಿ ಸೇವೆಯನ್ನು ಸಲ್ಲಿಸಿ ಈ ದಿನ ಜ. 31 ರಂದು ವಯೋನಿವೃತ್ತಿಯನ್ನು ಹೊಂದಿದರು.
ಇವರಿಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಜಿಲ್ಲಾ ಪೊಲೀಸ್ ಕಚೇರಿಯಲ್ಲಿ ಎಸ್ ಪಿ ನಿಖಿಲ್ ಸನ್ಮಾನಿಸಿ ಬೀಳ್ಕೊಡುಗೆ ನೀಡಿ ಮುಂದಿನ ನಿವೃತ್ತಿ ಜೀವನಕ್ಕೆ ಶುಭ ಕೋರಿದರು.



