ಶಿವಮೊಗ್ಗ | ಕ್ಯಾಂಟರ್ ನಡುವೆ ಭೀಕರ ಅಪಘಾತ: ಸೊರಬದ ಇಬ್ಬರು ಸ್ಥಳದಲ್ಲೇ ಸಾವು

ಶಿವಮೊಗ್ಗ

ಶಿವಮೊಗ್ಗ: ಕಾರು ಮತ್ತು ಕ್ಯಾಂಟರ್ ನಡುವೆ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಇಬ್ಬರು ಸಾವನ್ನಪ್ಪಿದ ಘಟನೆ ಆನಂದಪುರ ಉಳ್ಳೂರು ಸಮೀಪ ಭಾನುವಾರ ತಡರಾತ್ರಿ ಸಂಭವಿಸಿದೆ.

ಆನಂದಪುರದ ಸ್ನೇಹಿತನ ಮನೆಯಲ್ಲಿ ಕಾರ್ಯಕ್ರಮ ಮುಗಿಸಿ ಹಿಂತಿರುಗುತ್ತಿದ್ದ ಇಬ್ಬರು ಸ್ನೇಹಿತರು ರಸ್ತೆ ಅಪಘಾತಕ್ಕೆ ಬಲಿಯಾಗಿದ್ದಾರೆ.

ಸೊರಬ ತಾಲ್ಲೂಕಿನ ಮಳಲಗದ್ದೆ ಗ್ರಾಮದ ಪವಿತ್ರ ಹಾಗೂ ತಡೆಗಡಲೆ ಗ್ರಾಮದ ವೀರೇಶ್‌ ಮೃತಪಟ್ಟವರು.

ಇಬ್ಬರೂ ಕಾರಿನಲ್ಲಿ ಸಾಗರದ ಕಡೆಗೆ ಪ್ರಯಾಣಿಸುತ್ತಿದ್ದರು. ಈ ವೇಳೆ ಸಾಗರದಿಂದ ಆನಂದಪುರದ ಕಡೆಗೆ ಅತಿ ವೇಗವಾಗಿ ಬರುತ್ತಿದ್ದ ಕ್ಯಾಂಟರ್ ವಾಹನವು, ಕಾರಿಗೆ ಮುಖಾಮುಖಿ ಡಿಕ್ಕಿ ಹೊಡೆದಿದೆ.

ಅಪಘಾತದ ತೀವ್ರತೆಗೆ ಕಾರು ನಜ್ಜುಗುಜ್ಜಾಗಿದ್ದು,ಕ್ಯಾಂಟರ್ ಚಾಲಕನ ಅಜಾಗರೂಕತೆಯೇ ಈ ದುರಂತಕ್ಕೆ ಕಾರಣ ಎಂದುಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.

Author