ಶಿವಮೊಗ್ಗದ ಸಕ್ರೇಬೈಲ್ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ಓರ್ವ ಗಂಭೀರವಾಗಿರುವ ಬಗ್ಗೆ ವರದಿಯಾಗಿದೆ.
ತೀರ್ಥಹಳ್ಳಿಯಿಂದ ಶಿವಮೊಗ್ಗಕ್ಕೆ ಹೋಗುತ್ತಿದ್ದ ಖಾಸಗಿ ಬಸ್ ಹಾಗೂ ಶಿವಮೊಗ್ಗದಿಂದ ತೀರ್ಥಹಳ್ಳಿ ಕಡೆ ಬರುತ್ತಿದ್ದ ಆಲ್ಟೊ ಕಾರ್ ನಡುವೆ ಅಪಘಾತ ಸಂಭವಿಸಿದೆ.ಕಾರಿನಲ್ಲಿದ್ದ ಮೂವರಲ್ಲಿ ಓರ್ವನ ಸ್ಥಿತಿ ಗಂಭೀರವಾಗಿದ್ದು ಆತನನ್ನು ಶಿವಮೊಗ್ಗ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.
ಬಸ್ಸಿನ ಮುಂಭಾಗ ಹಾಗೂ ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದ್ದು ಕಾರು ಬಲ ಭಾಗಕ್ಕೆ ಹೋಗಿ ಬಸ್ಸಿಗೆ ಡಿಕ್ಕಿ ಹೊಡೆದಿದೆ.



