ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ವಿಧಾನಸಭೆಯಲ್ಲಿ‌ ನಿರ್ಣಯ ಮಂಡಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು

ಬೆಂಗಳೂರು, ಮನರೇಗಾ ಬದಲಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಬಿ-ಜಿ ರಾಮ್ ಜಿ ಕಾಯ್ದೆ ವಿರುದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಗಳವಾರ (ಫೆ.3) ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿದರು.

ರಾಜ್ಯದ ಗ್ರಾಮೀಣ ಜನರ ಬದುಕಿನ ಹಕ್ಕನ್ನು ಕಾಪಾಡುವ ದೃಷ್ಟಿಯಿಂದ, ಒಕ್ಕೂಟ ತತ್ವಕ್ಕೆ ವಿರೋಧವಾಗಿರುವ ಮತ್ತು ರಾಜ್ಯದ ಬೊಕ್ಕಸಕ್ಕೆ ತೀವ್ರ ಹೊರೆ ಉಂಟುಮಾಡುವ ವಿಬಿ-ಜಿ ರಾಮ್‌ ಜಿ ಕಾಯ್ದೆಯನ್ನು ಕೇಂದ್ರ ಸರ್ಕಾರ ತಕ್ಷಣವೇ ರದ್ದುಗೊಳಿಸಬೇಕು ಎಂದು ಆಗ್ರಹಿಸಿದರು.

ವಿಕೇಂದ್ರೀಕರಣ ತತ್ವಕ್ಕೆ ವಿರುದ್ಧವಾಗಿರುವ, ಗ್ರಾಮ ಪಂಚಾಯತಿಗಳ ಅಧಿಕಾರ ಮತ್ತು ಹಕ್ಕುಗಳನ್ನು ಕಸಿದುಕೊಂಡಿರುವ ಈ ಕಾಯ್ದೆಯನ್ನು ತಕ್ಷಣವೇ ರದ್ದುಗೊಳಿಸಬೇಕು ಎಂದರು.

ಗ್ರಾಮೀಣ ಆಸ್ತಿ ಸೃಜನೆಗೆ ಮತ್ತು ಬಡವರ ಸ್ವಾವಲಂಬನೆಗೆ ಕಾರಣವಾಗಿದ್ದ ಮನರೇಗಾ ಕಾಯ್ದೆಯನ್ನು ಈ ಹಿಂದಿನಂತೆ ಅದರ ಮೂಲ ಸ್ವರೂಪದಲ್ಲಿಯೇ ಮರುಸ್ಥಾಪಿಸಬೇಕು ಎಂದು ಈ ಒತ್ತಾಯಿಸಿದರು.

Author