ಶಿವಮೊಗ್ಗ | ಬಿಎಂಡಬ್ಲ್ಯು ಕಾರಿಗೆ ಮಹಿಳೆ ಅರ್ಚಕನ ಪತ್ನಿ ಬಲಿ!

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ, ತಾಲ್ಲೂಕಿನ ಮೇಗರವಳ್ಳಿ ಸಮೀಪ ಸಂಭವಿಸಿದ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ. ರಾಷ್ಟ್ರೀಯ ಹೆದ್ದಾರಿ 169ಎ ಮಾರ್ಗದಲ್ಲಿ ಮಂಗಳವಾರ ಬೆಳಿಗ್ಗೆ ಈ ಘಟನೆ ಸಂಭವಿಸಿದ್ದು, ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಮಹಿಳೆ ಸಾವನ್ನಪ್ಪಿದ್ದಾರೆ.

ಇನ್ನೂ ಇವರ ಪತಿ ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನ ಚಿಕಿತ್ಸೆಗೆ ಒಳಪಡಿಸಲಾಗಿದೆ.ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಕಾರಿಗೆ ಅತೀ ವೇಗವಾಗಿ ಬಂದ ಬಿಎಂಡಬ್ಲ್ಯೂ (BMW) ಕಾರು ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿದೆ ಎಂದು ತಿಳಿದುಬಂದಿದೆ.

ಮೃತ ದುರ್ದೈವಿಯನ್ನು ಮೇಗರವಳ್ಳಿ ನಿವಾಸಿ 42 ವರ್ಷದ ಮಲ್ಲಿಕಾ ಜೋಗಿ ಎಂದು ಗುರುತಿಸಲಾಗಿದೆ. ಮೇಗರವಳ್ಳಿಯ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಅರ್ಚಕರಾದ ಅಶೋಕ್ ಜೋಗಿ ಅವರ ಪತ್ನಿಯಾಗಿದ್ದಾರೆ.

ತೀರ್ಥಹಳ್ಳಿ ಕಡೆಯಿಂದ ವೇಗವಾಗಿ ಬಂದ ಕಾರು ನಿಯಂತ್ರಣ ತಪ್ಪಿ ರಸ್ತೆ ಬದಿ ನಿಂತಿದ್ದ ಕಾರಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯಾದ ರಭಸಕ್ಕೆ ನಿಂತಿದ್ದ ಕಾರಿನಲ್ಲಿದ್ದ ದಂಪತಿ ತೀವ್ರವಾಗಿ ಗಾಯಗೊಂಡಿದ್ದರು.

ಇಬ್ಬರನ್ನೂ ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಆದರೆ ಮಾರ್ಗಮಧ್ಯೆ ಮಲ್ಲಿಕಾ ಜೋಗಿ ಸಾವನ್ನಪ್ಪಿದ್ದಾರೆ.

ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿರುವ ಅರ್ಚಕ ಅಶೋಕ್ ಜೋಗಿ ಅವರು ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author