ಉಡುಪಿ | ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ ನಿಧನ

ಉಡುಪಿ

ಉಡುಪಿ,ಜಿಲ್ಲೆಯ ಹಿರಿಯ ರಾಜಕಾರಣಿ, ಬೈಂದೂರಿನ ಮಾಜಿ ಶಾಸಕ ಬಸ್ರೂರು ಅಪ್ಪಣ್ಣ ಹೆಗ್ಡೆ (90) ಅವರು ಅಲ್ಪಕಾಲದ ಅಸೌಖ್ಯದಿಂದ ಶನಿವಾರ ಮುಂಜಾನೆ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.

1935ರ ಡಿ.24ರದು ಬಸ್ರೂರಿನಲ್ಲಿ ಜನಿಸಿದ ಇವರು 1960ರಲ್ಲಿ ಸಹಕಾರಿ ಸಂಘದ ಸದಸ್ಯರಾಗಿ ಸಾರ್ವಜನಿಕ ಬದುಕಿಗೆ ಕಾಲಿರಿಸಿದ್ದರು. 1988-94ರ ಅವಧಿಯಲ್ಲಿ ಜನತಾ ಪಕ್ಷದಿಂದ ಶಾಸಕರಾಗಿ ಆಯ್ಕೆಯಾಗಿದ್ದರು.

ಅಪ್ಪಣ್ಣ ಹೆಗ್ಡೆ ಅವರು ಕೊಲ್ಲೂರು ಮೂಕಾಂಬಿಕಾ ದೇವಸ್ಥಾನ ಹಾಗೂ ಬಸ್ರೂರಿನ ಮಹಾಲಿಂಗೇಶ್ವರ ದೇವಸ್ಥಾನದ ಆಡಳಿತ ಧರ್ಮದರ್ಶಿಯಾಗಿಯೂ ಕಾರ್ಯನಿರ್ವಹಿಸಿದ್ದರು.

ಮೃತರು ಇಬ್ಬರು ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.”

Author