ಶಿವಮೊಗ್ಗ | ಬೈಪಾಸ್ ರಸ್ತೆಯ ಸ್ಕ್ರಾಪ್ ಅಂಗಡಿಗೆ ಬೆಂಕಿ ; ಲಕ್ಷಾಂತರ ರೂ. ನಷ್ಟ

ಶಿವಮೊಗ್ಗ

ಶಿವಮೊಗ್ಗ ನಗರದ ಹೊರವಲಯದ ಬೈಪಾಸ್ ರಸ್ತೆಯಲ್ಲಿ ಇರುವ ಎಸ್.ಕೆ. ಟ್ರೇಡರ್ಸ್ ಎಂಬ ಸ್ಕ್ರಾಪ್ ಅಂಗಡಿಯಲ್ಲಿ ಬೆಳಿಗ್ಗೆ ಭಾರೀ ಅಗ್ನಿ ಅವಘಡ ಸಂಭವಿಸಿ ಅಂಗಡಿ ಸಂಪೂರ್ಣವಾಗಿ ಕರಕಲಾಗಿದೆ.

ಈ ಅಂಗಡಿ ಶಹಬಾಜ್ ಅವರ ಒಡೆತನದಲ್ಲಿದ್ದು, ಬೆಂಕಿಯ ತೀವ್ರತೆಯಿಂದ ಅಂಗಡಿಯಲ್ಲಿದ್ದ ಸ್ಕ್ರಾಪ್ ಸಾಮಗ್ರಿಗಳು ಸಂಪೂರ್ಣವಾಗಿ ನಾಶವಾಗಿವೆ.

ಬೆಂಕಿ ಕಾಣಿಸಿಕೊಂಡ ತಕ್ಷಣವೇ ಅಗ್ನಿಶಾಮಕ ದಳದ ಸಿಬ್ಬಂದಿಗೆ ಮಾಹಿತಿ ನೀಡಲಾಗಿದ್ದು, ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ವಾಹನಗಳು ಬೆಂಕಿಯನ್ನು ಹಾರಿಸುವ ಕಾರ್ಯದಲ್ಲಿ ತೊಡಗಿಕೊಂಡು ಹೆಚ್ಚಿನ ಅನಾಹುತವನ್ನು ತಪ್ಪಿಸಿದ್ದಾರೆ.

ಈ ಘಟನೆ ಸಂಬಂಧ ತುಂಗಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಅಗ್ನಿ ಅವಘಡಕ್ಕೆ ನಿಖರ ಕಾರಣ ಇನ್ನೂ ತಿಳಿದುಬಂದಿಲ್ಲ.ಅಂಗಡಿಯಲ್ಲಿ ಸಂಗ್ರಹಿಸಿದ್ದ ಸ್ಕ್ರಾಪ್ ವಸ್ತುಗಳು ಸಂಪೂರ್ಣವಾಗಿ ಸುಟ್ಟುಹೋಗಿದ್ದು, ಲಕ್ಷಾಂತರ ರೂ. ಮೌಲ್ಯದ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.

ಆದರೆ ನಿಖರ ನಷ್ಟದ ಮೊತ್ತವನ್ನು ಲೆಕ್ಕ ಹಾಕುವ ಪ್ರಕ್ರಿಯೆ ನಡೆಯುತ್ತಿದೆ ಎಂದು ತಿಳಿದುಬಂದಿದೆ. ಅಗ್ನಿಶಾಮಕ ದಳದ ಸಮಯೋಚಿತ ಕಾರ್ಯದಿಂದ ಸುತ್ತಮುತ್ತಲ ಅಂಗಡಿಗಳಿಗೆ ಬೆಂಕಿ ಹರಡದಂತೆ ತಡೆಯಲಾಗಿದೆ.

Author