ಸೊರಬ, ವಿಧಾನಸಭಾ ಕ್ಷೇತ್ರದ ಬಂಕವಳ್ಳಿ ಗ್ರಾಮದಲ್ಲಿ ಮೂಲಸೌಕರ್ಯ ವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುತ್ತಿದ್ದು, ಬುಧವಾರ ಗ್ರಾಮದಲ್ಲಿ ಸುಮಾರು ೭೮.೫೦ ಲಕ್ಷ ರೂಪಾಯಿಗಳ ವೆಚ್ಚದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಲೋಕಾರ್ಪಣೆ ಹಾಗೂ ಶಂಕುಸ್ಥಾಪನೆಯನ್ನು ನೆರವೇರಿಸಲಾಯಿತು.
ಸುಮಾರು ೫೮.೫೦ ಲಕ್ಷ ರೂಪಾಯಿ ವೆಚ್ಚದಲ್ಲಿ ಜಲ ಜೀವನ್ ಮಿಷನ್ (ಎಎಒ) ಯೋಜನೆಯಡಿ ನಿರ್ಮಿಸಲಾದ ಬೃಹತ್ ನೀರಿನ ಟ್ಯಾಂಕ್ ಅನ್ನು ಉದ್ಘಾಟಿಸಲಾಯಿತು.
ಇದರಿಂದ ಗ್ರಾಮದ ಪ್ರತಿ ಮನೆಗೂ ಸುಗಮವಾಗಿ ಕುಡಿಯುವ ನೀರು ಪೂರೈಕೆಯಾಗಲಿದೆ. ಗ್ರಾಮದ ಎಸ್.ಟಿ. ಕೇರಿಯಲ್ಲಿ ಸಮುದಾಯದ ಕಾರ್ಯಕ್ರಮಗಳಿಗೆ ಅನುಕೂಲವಾಗುವಂತೆ ಸುಮಾರು ೨೦ ಲಕ್ಷ ರೂಪಾಯಿ ವೆಚ್ಚದ ’ವಾಲ್ಮೀಕಿ ಭವನ’ ನಿರ್ಮಾಣ ಕಾಮಗಾರಿಗೆ ಅಧಿಕೃತವಾಗಿ ಗುದ್ದಲಿ ಪೂಜೆ ನೆರವೇರಿಸಲಾಯಿತು.
ಈ ವೇಳೆ ಜನಪ್ರತಿನಿಧಿಗಳು, ಮುಖಂಡರುಗಳು, ಬಂಕವಳ್ಳಿ ಗ್ರಾಮದ ಗ್ರಾಮಸ್ಥರು ಹಾಗೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.



