ಶಿವಮೊಗ್ಗ | NES ಖಾಸಗಿಕರಣ ವಿರೋಧಿಸಿ NSUI ಪ್ರತಿಭಟನೆ

ಶಿವಮೊಗ್ಗ

ಶಿವಮೊಗ್ಗ,ರಾಷ್ಟ್ರೀಯ ಶಿಕ್ಷಣ ಸಮಿತಿಯು ತಮ್ಮ ಸ್ವಾಧಿನದಲ್ಲಿರುವ ಕೇಲವು ಕಾಲೇಜಗಳನ್ನು ಖಾಸಗಿಕರಣಗೊಳಿಸುವ ಪ್ರಯತ್ನವನ್ನು ಕೈಬಿಡಲು ಅಗ್ರಹಿಸಿ ಇಂದು ಎನ್ ಎಸ್ ಯು ಐ ವಿದ್ಯಾರ್ಥಿ ಸಂಘಟನೆ ಎಸ್ ಆರ್ ಎನ್ ಎಂ ಕಾಲೇಜು ಮುಂಭಾಗ ಪ್ರತಿಭಟನೆ ನಡೆಸಿತು.

ಶಿವಮೊಗ್ಗದ ಪ್ರತಿಷ್ಠಿತ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ ಅಡಿಯಲ್ಲಿ ಬರುವ ರಾಷ್ಟ್ರೀಯ ವಾಣಿಜ್ಯ (Commerce) ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನ ಮಾಡಲಾಗುತ್ತಿದ್ದು, ಇದನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ತೀವ್ರವಾಗಿ ಖಂಡಿಸುತ್ತದೆ ಎಂದು ತಿಳಿಸಿದೆ.

ಎ.ಟಿ.ಎನ್.ಸಿ.ಸಿ. ಕಾಲೇಜು ಶಿವಮೊಗ್ಗದ ಪ್ರತಿಷ್ಠಿತ ವಾಣಿಜ್ಯ ಕಾಲೇಜಾಗಿದ್ದು ಲಕ್ಷಾಂತರ ವಿದ್ಯಾರ್ಥಿಗಳ ಜೀವನ ರೂಪಿಸುತ್ತಿದೆ. ಬಹುತೇಕ ಉಚಿತ ನಿವೇಶನ, ಕಟ್ಟಡ ನಿರ್ಮಾಣಕ್ಕೆ ಶಿಕ್ಷಣ ಸಮಿತಿ ಅಡಿಯದ ಜೊತೆಗೆ ಸರ್ಕಾರದ ಅನುದಾನ ನೀಡಿ, ಬೋಧಕ-ಬೋಧಕೇತರ ಸಿಬ್ಬಂದಿಗೆ ವೇತನ ಮತ್ತಿತರುವಗಳನ್ನು ಸರ್ಕಾರವೇ ನೀಡುತ್ತಾ ಬರುತ್ತಿದೆ.

ಇದರಿಂದಾಗಿ ಸಾವಿರಾರು ವಿದ್ಯಾರ್ಥಿಗಳು ಕಡಿಮೆ ವೆಚ್ಚದಲ್ಲಿ ಉತ್ತಮವಾದ ಶಿಕ್ಷಣವನ್ನು ಪಡೆದು ಬದುಕು ರೂಪಿಸಿಕೊಂಡಿದ್ದಾರೆ. ಆದರೆ, ಇತ್ತೀಚಿನ ದಿನಗಳಲ್ಲಿ ರಾಷ್ಟ್ರೀಯ ಶಿಕ್ಷಣ ಸಮಿತಿಯಿಂದ ಎ.ಟಿ.ಎನ್.ಸಿ. ಕಾಲೇಜು ಮತ್ತು ಇನ್ನಿತರೆ ಕಾಲೇಜುಗಳನ್ನು ಅನುದಾನರಹಿತ ಖಾಸಗಿ ಕಾಲೇಜೇಂದು ಮಾರ್ಪಡಿಸುವಂತೆ ಕುವೆಂಪು ವಿಶ್ವವಿದ್ಯಾಲಯಕ್ಕೆ ಅರ್ಜಿ ಸಲ್ಲಿಸಲಾಗಿದೆ.

oplus_0

ಅಲ್ಲದೇ ಈ ಕಾಲೇಜಿನಲ್ಲಿ ಸರ್ಕಾರದ ವೇತನ ಪಡೆದು ಕಾರ್ಯ ನಿರ್ವಹಿಸುತ್ತಿದ್ದ ಪೂರ್ಣಾವಧಿ ಬೋಧಕ-ಬೋಧಕೇತರ ಸಿಬ್ಬಂದಿಗಳನ್ನು ಬೇರೆ ಬೇರೆ ಕಾಲೇಜುಗಳಿಗೆ ನಿಯೋಜಿಸಲಾಗಿದ್ದು.

ಮುಂದಿನ ದಿನಗಳಲ್ಲಿ ಬೇರೆ ಅಧ್ಯಾಪಕರನ್ನು ನೇಮಕ ಮಾಡಿಕೊಳ್ಳುತ್ತಿದ್ದಾರೆ ಎಂಬ ವಿಚಾರ ತಿಳಿದು ಬಂದಿದ್ದು ವಿದ್ಯಾರ್ಥಿಗಳಲ್ಲಿ ಆತಂಕ ಉಂಟುಮಾಡಿದೆ.

oplus_0

ದಿವಂಗತ ಎಸ್.ಆರ್. ನಾಗಪ್ಪಶ್ರೇಷ್ಠಿ ಹಾಗೂ ಗಿರಿಮಾಜಿ ರಾಜಗೋಪಾಲ್‌ರವರಂತಹ ಹಿರಿಯರ ನೇತೃತ್ವದಲ್ಲಿ ಸ್ಥಾಪನೆಯಾದ ರಾಷ್ಟ್ರೀಯ ಶಿಕ್ಷಣ ಸಮಿತಿಯು ಎಲ್ಲಾ ವರ್ಗದ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರಕಲಿ ಎಂಬ ಮಹದುದ್ದೇಶದಿಂದ ಎನ್.ಇ.ಎಸ್. ಸಂಸ್ಥೆಯನ್ನು ಸ್ಥಾಪಿ ಸ್ಥಾಪಿಸಿ ಈ ಮೂಲಕ ಕಡಿಮೆ ವೆಚ್ಚದಲ್ಲಿ ಗುಣಮಟ್ಟದ ಶಿಕ್ಷಣ ದೊರೆಯಲು ನಾಂದಿ ಹಾಡಿದ್ದರು.

ಆದರೇ ಈಗ ಎನ್.ಇ.ಎಸ್. ಸಂಸ್ಥೆ ಶಿಕ್ಷಣ ವ್ಯಾಪಾರೀಕರಣಕ್ಕೆ ಇಳಿದಿರುವುದು ದುರ್ದೈವವಾಗಿದೆ ಎಂದರು.ಸರಿಸುಮಾರು ಅರ್ಧ ಶತಮಾನಗಳಷ್ಟು ಹಳೆಯದಾದ ಕಾಲೇಜುಗಳು ಇಷ್ಟು ವರ್ಷ ಸರ್ಕಾರದಿಂದ ಅನುದಾನ ಪಡೆದು ಎಲ್ಲ ವರ್ಗದ ವಿದ್ಯಾರ್ಥಿಗಳಿಗೆ ಕಡಿಮೆ ವೆಚ್ಚದಲ್ಲಿ ವಿದ್ಯಾಭ್ಯಾಸ ನೀಡುತ್ತಿದ್ದು ಇದೀಗ ಕೇವಲ ದುಡ್ಡು ಮಾಡುವ ದುರುದ್ದೇಶದಿಂದ ಈ ಕಾಲೇಜುಗಳನ್ನು ಖಾಸಗೀಕರಣ ಮಾಡುವುದು ಎಷ್ಟರಮಟ್ಟಿಗೆ ಸರಿ? ಎಂದು ಸಂಘಟನೆ ಪ್ರಶ್ನಿಸಿದೆ.

ಕೂಡಲೇ ರಾಷ್ಟ್ರೀಯ ಶಿಕ್ಷಣ ಸಮಿತಿ ಈ ಪ್ರಯತ್ನವನ್ನು ಕೈಬಿಟ್ಟು ಹಿಂದಿನಂತೆ ಅನುದಾನಿತ ಕಾಲೇಜಾಗಿ ಮುಂದುವರೆಸಬೇಕು. ಇಲ್ಲವಾದಲ್ಲಿ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ತೀವ್ರ ಪ್ರತಿಭಟನೆ ನಡೆಸಿ ಸರ್ಕಾರದ ಗಮನ ಸೆಳೆಯಲಾಗುವುದು ಎಂದು ಈ ಮೂಲಕ ಎಚ್ಚರಿಸುತಿದ್ದೇವೆ ಎಂದು ತಿಳಿಸಿ ಮನವಿ ಸಲ್ಲಿಸಿದ್ದಾರೆ.

ಈ ಪ್ರತಿಭಟನೆಯಲ್ಲಿ ವಿಜಯ್ ಕುಮಾರ್ ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ, ರವಿ, ಮಧುಸೂದನ್, ಚೇತನ್ ಗೌಡ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Author