ಶಿವಮೊಗ್ಗ | ಆತ್ಮಹತ್ಯೆಗೆ ಯತ್ನಿಸಿದ ಯುವಕನನ್ನು ರಕ್ಷಿಸಿದ ಪೊಲೀಸರು

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಹುತ್ತ ರೈಲ್ವೆ ಟ್ರ್ಯಾಕ್ ಮೇಲೆ ಮಲಗಿ ಆತ್ಮಹತ್ಯೆಗೆ ಯತ್ನಿಸುತ್ತಿದ್ದ 18 ವರ್ಷದ ಯುವಕನನ್ನು ನ್ಯೂ ಟೌನ್ ಪೊಲೀಸರು ಸಮಯೋಚಿತವಾಗಿ ರಕ್ಷಿಸಿದ ಘಟನೆ ಶನಿವಾರ ರಾತ್ರಿ ನಡೆದಿದೆ.

ಮಾಹಿತಿ ದೊರಕುತ್ತಿದ್ದಂತೆಯೇ ರಾತ್ರಿ ಗಸ್ತು ಕರ್ತವ್ಯದಲ್ಲಿದ್ದ ನಾಗರಾಜ ಹೆಚ್.ಸಿ ಮತ್ತು ಸಲೀಂ ಹೆಚ್.ಜಿ ಸ್ಥಳಕ್ಕೆ ಧಾವಿಸಿ, ಸಾರ್ವಜನಿಕರ ಸಹಾಯದಿಂದ ಯುವಕನನ್ನು ರಕ್ಷಿಸಿ ಠಾಣೆಗೆ ಕರೆತಂದರು.

ವಿಚಾರಣೆ ವೇಳೆ ಪ್ರೇಮ ವೈಫಲ್ಯದಿಂದ ಮನನೊಂದು ಆತ್ಮಹತ್ಯೆಗೆ ಯತ್ನಿಸಿದ್ದಾಗಿ ಯುವಕ ತಿಳಿಸಿದ್ದಾನೆ.

ಪೊಲೀಸರು ಯುವಕನಿಗೆ ಮನವಿ ಮಾಡಿ, ಬುದ್ಧಿವಾದ ಹೇಳಿ, ಪೋಷಕರನ್ನು ಕರೆಸಿ ಅವರೊಂದಿಗೆ ಕಳುಹಿಸಿದ್ದಾರೆ.

ನ್ಯೂ ಟೌನ್ ಪೊಲೀಸರ ಈ ಮಾನವೀಯ ಕಾರ್ಯವನ್ನು ನಿಖಿಲ್ ಬಿ.ಐಪಿಎಸ್, ಶಿವಮೊಗ್ಗ ಜಿಲ್ಲೆ ಪೊಲೀಸ್ ಅಧೀಕ್ಷಕರು ಪ್ರಶಂಸಿಸಿ ಅಭಿನಂದಿಸಿದ್ದಾರೆ.

Author