ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಯ ಹತ್ಯೆ ; ಕಾನೂನು ಸುವ್ಯವಸ್ಥೆಯ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ಸಂಸದ ಬಿ. ವೈ. ರಾಘವೇಂದ್ರ

ಶಿವಮೊಗ್ಗ

ಶಿವಮೊಗ್ಗದ ಊರುಗಡೂರಿನ ಸೂಳೆಬೈಲಿನಲ್ಲಿ ಗಾಂಜಾ ನಶೆಯಲ್ಲಿದ್ದ ಪುಂಡರು SSLC ವಿದ್ಯಾರ್ಥಿ ಸಂಕೇತ್ ನನ್ನು ಅಮಾನುಷವಾಗಿ ಹಲ್ಲೆ ಮಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಅವರ ನಿವಾಸಕ್ಕೆ ಖುದ್ದು ಭೇಟಿ ನೀಡಿ, ದುಃಖತಪ್ತ ಕುಟುಂಬವರ್ಗದವರಿಗೆ ಬಿ.ವೈ.ರಾಘವೇಂದ್ರ ಸಾಂತ್ವಾನ ಹೇಳಿದರು

ಆಸರೆಯಾಗಬೇಕಿದ್ದ ಮಗನನ್ನು ಕಳೆದುಕೊಂಡ ಹೆತ್ತವರ ಆಕ್ರಂದನ ಕಂಡು ಮನಸ್ಸಿಗೆ ಅತೀವ ಸಂಕಟವಾಯಿತು. ಭಗವಂತನು ಈ ದುಃಖವನ್ನು ಭರಿಸುವ ಶಕ್ತಿಯನ್ನು ಕುಟುಂಬಕ್ಕೆ ಕರುಣಿಸಲಿ ಎಂದು ಪ್ರಾರ್ಥಿಸಿದರು.

ಈ ದುರ್ಘಟನೆಗೆ ಹೊಣೆಗಾರರ ವಿರುದ್ಧ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರನ್ನು ಬಂಧಿಸಿ ಕಾನೂನಿನ ಅತ್ಯಂತ ಕಠಿಣ ಶಿಕ್ಷೆಗೆ ಒಳಪಡಿಸಬೇಕು. ಜೊತೆಗೆ, ಮೃತ ವಿದ್ಯಾರ್ಥಿಯ ಕುಟುಂಬಕ್ಕೆ ಸರ್ಕಾರ ತಕ್ಷಣ ಪರಿಹಾರ ನೀಡಿ, ಅಗತ್ಯ ನೆರವು ಒದಗಿಸಬೇಕು.

ಜನರ ಭದ್ರತೆ ಸರ್ಕಾರದ ಮೊದಲ ಆದ್ಯತೆಯಾಗಬೇಕು. ರಾಜ್ಯ ಸರ್ಕಾರ ತಕ್ಷಣ ಎಚ್ಚೆತ್ತುಕೊಂಡು ಕಾನೂನು ಸುವ್ಯವಸ್ಥೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ನಗರ ಘಟಕದ ಅಧ್ಯಕ್ಷರಾದ ಮೋಹನ್ ರೆಡ್ಡಿ, ಶ್ರೀಮತಿ ಸಂಗೀತ ನಾಗರಾಜ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ, ಮಾಲತೇಶ್ ಸಂತೋಷ್ ಬಳ್ಳೇಕೆರೆ ರಾಜೇಶ್ ಕಾಮತ್ ದಿವಾಕರ್ ಶೆಟ್ಟಿ ಹಾಗೂ ಮಾಧ್ಯಮ ಪ್ರಮುಖವಾದ ಚಂದ್ರಶೇಖರ್ ಎಸ್. ಉಪಸ್ಥಿತರಿದ್ದರು.

Author