ಇರಾನ್ ಗುರಿಯಾಗಿರಿಸಿಕೊಂಡು ಇಸ್ರೇಲ್ ನಡೆಸಿದ ಸರಣಿ ವೈಮಾನಿಕ ದಾಳಿಯಲ್ಲಿ ಇರಾನ್ ಸೇನಾಪಡೆಯ ಮುಖ್ಯಸ್ಥ ಜನರಲ್ ಅಮೀರ್ ಹಟಾಮಿ ಸಾವಿಗೀಡಾಗಿರುವುದಾಗಿ ಇಸ್ರೇಲ್ ಮಾಧ್ಯಮ ವರದಿಗಳು ತಿಳಿಸಿವೆ.
ಆದರೆ ಕಮಾಂಡರ್ ಹಟಾಮಿ ಸಾವಿನ ಕುರಿತು ಇರಾನ್ ಅಧಿಕೃತವಾಗಿ ಯಾವುದೇ ಹೇಳಿಕೆಯನ್ನು ಬಿಡುಗಡೆ ಮಾಡಿಲ್ಲ ಎಂದು ವರದಿ ತಿಳಿಸಿದೆ.
ಫೆ.28ರಂದು ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ಮಿಲಿಟರಿ ಕಾರ್ಯಾಚರಣೆ ಆರಂಭಿಸಿದ್ದು, ಇರಾನ್ ನಾದ್ಯಂತ ಭಾರೀ ಪ್ರಮಾಣದ ಸ್ಫೋಟದ ಶಬ್ದಗಳು ಕೇಳಿರುವುದಾಗಿ ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಇಸ್ರೇಲ್ ದಾಳಿಗೆ ಸಂಬಂಧಿಸಿದಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಪ್ರತಿಕ್ರಿಯೆ ನೀಡಿದ್ದು, ಇರಾನ್ ಮೇಲೆ ಅಮೆರಿಕ ವೈಮಾನಿಕ ಪಡೆಗಳು ದಾಳಿ ನಡೆಸಿದ್ದು, ಇದು ಪ್ರಮುಖ ಮಿಲಿಟರಿ ಕಾರ್ಯಾಚರಣೆಯಾಗಿದೆ.
ಅಮೆರಿಕ ಸೇನಾಪಡೆ ಇರಾನ್ ಮೇಲಿನ ದಾಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವುದಾಗಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಘೋಷಿಸಿದ್ದಾರೆ.ಇರಾನ್ ದುರಾಡಳಿತವನ್ನು ಕೊನೆಗಾಣಿಸುವುದೇ ನಮ್ಮ ಮುಖ್ಯ ಗುರಿಯಾಗಿದೆ.
ಅಲ್ಲದೇ ಇರಾನ್ ನ ಮಿಸೈಲ್ ಇಂಡಸ್ಟ್ರಿ ಹಾಗೂ ಪರಮಾಣು ನೆಲೆಯನ್ನು ನಿಷ್ಕ್ರಿಯಗೊಳಿಸುವ ಉದ್ದೇಶ ಹೊಂದಿರುವುದಾಗಿ ಟ್ರಂಪ್ ಪ್ರತಿಕ್ರಿಯೆ ನೀಡಿರುವುದಾಗಿ ವರದಿ ತಿಳಿಸಿದೆ.



