ಶಿವಮೊಗ್ಗ, ವಿನೋಬನಗರ ಪೊಲೀಸ್ ಸ್ಟೇಷನ್ ಬಳಿಯ ವಿಕಾಸ ಸ್ಕೂಲ್ ಬಳಿ ಮಾರಕಾಸ್ತ್ರಗಳೊಂದಿಗೆ ಅನುಮಾನಾಸ್ಪದವಾಗಿ ತಿರುಗಾಡುತ್ತಿದ್ದ ಇಬ್ಬರು ಯುವಕರನ್ನು ವಿನೋಬನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಇಬ್ಬರು ಯುವಕರು ಬೈಕ್ನಲ್ಲಿ ಆಯುಧ ಇಟ್ಟುಕೊಂಡು ಓಡಾಡುತ್ತಿದ್ದ ಬಗ್ಗೆ ಪೊಲೀಸರಿಗೆ ಜನರೇ ಮಾಹಿತಿ ನೀಡಿದ್ದರು.
ಈ ಹಿನ್ನೆಲೆಯಲ್ಲಿ ಪೊಲೀಸರು ಹುಡುಕಾಟ ಆರಂಭಿಸಿದ್ದರು.ನಂತರ ಬೈಕ್ನಲ್ಲಿ ಎರಡು ಮಚ್ಚು ಇಟ್ಟುಕೊಂಡು ಓಡಾಡುತ್ತಿದ್ದ ಇಬ್ಬರನ್ನು ಬಂಧನ ಮಾಡಿದ್ದಾರೆ.
ವಿಚಾರಣೆ ವೇಳೆ ಆರೋಪಿಗಳು ಸಮರ್ಪಕ ಉತ್ತರ ನೀಡಿಲ್ಲ. ಹೀಗಾಗಿ ಆರ್ಮ್ಸ್ ಆಕ್ಟ್ ಅಡಿಯಲ್ಲಿ ಕೇಸ್ ದಾಖಲಿಸಿ, ಇಬ್ಬರನ್ನು ಬಂಧನಕ್ಕೆ ಒಳಪಡಿಸಿದ್ದರು. ಈ ಬಗ್ಗೆ ತನಿಖೆ ಮುಂದುವರಿದಿದೆ.



