ಶಿವಮೊಗ್ಗ,ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ರಾಜ್ಯದ ಗುತ್ತಿಗೆದಾರರಿಗೆ ಪೂರ್ಣಗೊಂಡ ಕಾಮಗಾರಿಗಳ ಹಣ ಪಾವತಿಸಲೂ ಅಗದಿರುವಷ್ಟು ದಿವಾಳಿ ಹಂತ ತಲುಪಿದೆ. ಗುತ್ತಿಗೆದಾರರು ಹಲವು ಬಾರಿ ಸರ್ಕಾರವನ್ನು ಈ ವಿಷಯವಾಗಿ ಎಚ್ಚರಿಸಿದ್ದರೂ ಹಣಕಾಸು ಖಾತೆಯನ್ನು ತಮ್ಮ ಬಳಿಯೇ ಇಟ್ಟುಕೊಂಡಿದ್ದರೂ ನಿಸ್ಸಹಾಯಕರಾಗಿ ಕುಳಿತಿದ್ದಾರೆ ಎಂದು ಮಾಜಿ ಡಿ ಸಿಎಂ ಕೆ ಎಸ್ ಈಶ್ವರಪ್ಪ ಹೇಳಿದ್ದಾರೆ.
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಲೋಕೋಪಯೋಗಿ ಇಲಾಖೆ, ಜಲಸಂಪನ್ಮೂಲ ಇಲಾಖೆ, ಆರ್.ಡಿ.ಪಿ.ಅರ್.ಇಲಾಖೆ, ಸಣ್ಣ ನೀರಾವರಿ ಇಲಾಖೆ, ನಗರಾಭಿವೃದ್ಧಿ ಇಲಾಖೆ, ವಸತಿ ಮತ್ತು ವಕ್ಸ್ ಇಲಾಖೆ, ಕಾರ್ಮಿಕ ಇಲಾಖೆ, ಜಜಎಂಪಿ ಹೀಗೆ ಹಲವು ಇಲಾಖೆಗಂದ ರಾಜ್ಯ ಗುತ್ತಿಗೆದಾರರಿಗೆ ಬಾಕಿ ಇರುವ ಮೊತ್ತ ಸುಮಾರು 37,000/- ಕೋಟಿ ರೂಪಾಯ (ಮುವತ್ತೇಳು ಸಾವಿರ ಕೋಟ)ಗಳನ್ನು ಪಾವತಿ ಮಾಡದೆ ಗುತ್ತಿಗೆದಾರರನ್ನು ಸಂಕಷ್ಟಕ್ಕೆ ಸಿಲುಕಿಸಿದೆ.
ಈ ಕಾರಣದಿಂದ ರಾಜ್ಯ ಸರ್ಕಾರದ ಮೇಲೆ ನಂಬಿಕೆಯನ್ನೇ ಕಳೆದುಕೊಂಡಿರುವ ಗುತ್ತಿಗೆದಾರರು ಕಾಮಗಾರಿ ಪೂರ್ಣಗೊಂಡರೂ ಸರ್ಕಾರದಿಂದ ಹಣ ಬರುವ ಯಾವುದೇ ಗ್ಯಾರಂಟಿ ಇಲ್ಲದ ಕಾರಣದಿಂದ ಸರ್ಕಾರದ ಕಾಮಗಾರಿಗೆ ಟೆಂಡರ್ ಹಾಕುವುದನ್ನೇ ನಿಲ್ಲಿಸಿದ್ದಾರೆ ಎಂದರು.
ಇದಕ್ಕೆ ತಾಜಾ ಉದಾಹರಣೆ ಶಿವಮೊಗ್ಗ ಸಮೀಪದ ಯಲವಟ್ಟಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಟೆಂಡರ್ ಕರೆದಾಗ ಯಾವುದೇ ಗುತ್ತಿಗೆದಾರರು ಟೆಂಡರ್ ಪ್ರಕ್ರಿಯೆಯಲ್ಲಿ ಭಾಗವಹಿಸಿಲ್ಲ.ಸರ್ಕಾರದಿಂದ ಹಣ ಬಿಡುಗಡೆಯಾಗದೆ ಶಿವಮೊಗ್ಗದ ಆಶ್ರಯ ಯೋಜನೆಯ ಮನೆಗಳ ಕಾಮಗಾರಿಯೂ ಸೇರಿದಂತೆ ರಾಜ್ಯದಾದ್ಯಂತ ಸಾವಿರಾರು ಕಾಮಗಾರಿಗಳು ಅರ್ದಕ್ಕೆ ನಿಂತಿರುವುದು ರಾಜ್ಯದ ಅಭಿವೃದ್ಧಿಗೆ ದೊಡ್ಡ ತೊಡಕಾಗಿದೆ.
ಟೆಂಡರ್ ಪ್ರಕ್ರಿಯೆಯಲ್ಲಿ ಕೇಂದ್ರೀಕೃತ ವ್ಯವಸ್ಥೆಯನ್ನು ಜಾರಿಗೆ ತರಲು ಹೊರಟಿರುವ ಸರ್ಕಾರ ಬೃಹತ್ ಮೊತ್ತದ ಟೆಂಡರ್ಗಳನ್ನು ಕರೆದು ಹೊರ ರಾಜ್ಯದ ಗುತ್ತಿಗೆದಾರರಿಗೆ ಅನುಕೂಲ ಕಲ್ಪಿಸುವ ನಿಟ್ಟನಲ್ಲಿ ಕನ್ನಡಿಗರಿಗೆ ಅನ್ಯಾಯವೆಸಗುತ್ತಿದೆ ಎಂದರು.
ಸರ್ಕಾರದ ಈ ನಿರ್ಲಕ್ಷ ಮತ್ತು ಬಾಕಿ ಉಳಿಸಿಕೊಂಡಿರುವ ಹಣದ ಒಡುಗಡೆಗೆ ಒತ್ತಾಯಿಸಿ ರಾಜ್ಯ ಗುತ್ತಿಗೆದಾರರ ಸಂಘವು 06-03-2026 ರಂದು ರಾಜ್ಯಮಟ್ಟದ ಬೃಹತ್ ಪ್ರತಿಭಟನೆಯನ್ನು ಬೆಂಗಳೂರಿನಲ್ಲಿ ನಡೆಸುತ್ತಿದೆ.
ಈಗಲಾದರೂ ಸರ್ಕಾರ ಎಚ್ಚೆತ್ತುಕೊಂಡು ಗುತ್ತಿಗೆದಾರರ ಬಾಕಿ ಮೊತ್ತವನ್ನು ಪಾವತಿಸಿ ರಾಜ್ಯದ ಅಭಿವೃದ್ಧಿ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕೆಂದು ಆಗ್ರಹಿಸಿದರು.



