ಸಿಎಂ ಸಿದ್ದರಾಮಯ್ಯರಿಂದ 4.48 ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡನೆ,
ಹಸು, ಹೆಮ್ಮೆ ಖರೀದಿಸಲು 40 ಸಾವಿರ ಪ್ರೋತ್ಸಾಹಧನ
ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಹೆಸರು ಬದಲಾವಣೆ.ಶಾಂತವೇರಿ ಗೋಪಾಲಗೌಡ ಹೆಸರು ನಾಮಕರಣ.
ಇಂದಿರಾ ಕಿಟ್ ವಿತರಣೆಗೆ 6,200 ಕೋಟಿ ಮೀಸಲು.
ಅನ್ನ ಭಾಗ್ಯ ಯೋಜನೆ ಅಡಿಯಲ್ಲಿ ಇಂದಿರಾ ಕಿಟ್ ವಿತರಣೆಗೆ 2026- 27ನೇ ಸಾಲಿನಲ್ಲಿ 6,200 ಕೋಟಿ ಮೀಸಲು ಇಡಲಾಗಿದೆ.
16 ವರ್ಷದೊಳಗಿನ ಮಕ್ಕಳಿಗೆ ಸಾಮಾಜಿಕ ಜಾಲತಾಣ ನಿಷೇಧಹೆಚ್ಚುತ್ತಿರುವ ಮೊಬೈಲ್ ಬಳಕೆ ಮಕ್ಕಳ ಮೇಲೆ ಪರಿಣಾಮ ಬೀರುತ್ತಿರುವ ಹಿನ್ನಲೆಯಲ್ಲಿ ಹಾಗೂ ಅಡ್ಡಪರಿಣಾಮ ತಡೆಗಟ್ಟುವ ಹಿನ್ನೆಲೆಯಲ್ಲಿ 16 ವಯಸ್ಸಿನ ಮಕ್ಕಳಿಗೆ ಸಾಮಾಜಿಕ ಜಾಲತಾಣದ ಬಳಕೆಯನ್ನು ರಾಜ್ಯ ಸರ್ಕಾರ ನಿಷೇಧಿಸಿದೆ.
ವಿದ್ಯಾರ್ಥಿಗಳಲ್ಲಿ ಒತ್ತಡ ನಿವಾರಿಸಿ ಮಾನಸಿಕ ಆರೋಗ್ಯವನ್ನು ಸುಧಾರಿಸಲು 204 ಬಿ ಆರ್ ಸಿ ಕೇಂದ್ರಗಳಲ್ಲಿ ಓರ್ವ ಅರ್ಹ ಮಾನಸಿಕ ಆರೋಗ್ಯ ಸಲಹೆಗಾರ ನೇಮಕ ಬಜೆಟ್‌ನಲ್ಲಿ ಘೋಷಣೆ.
ಬೆಂಗಳೂರು ಅಭಿವೃದ್ಧಿಗೆ ಬಂಪರ್ ಅನುದಾನ.
ಬೆಂಗಳೂರು ಅಭಿವೃದ್ಧಿಗೆ 7 ಕೋಟಿ ಅನುದಾನ ಮೀಸಲು.
ಎತ್ತಿನಹೊಳೆ ನೀರು ಸಂಗ್ರಹಣೆಗಾಗಿ ಜಲಾಶಯ ನಿರ್ಮಾಣ.
ಕೋಲಾರದಲ್ಲಿ ಪ್ರಾಯೋಗಿಕ ರೈತ ಮಾಲ್ ಸ್ಥಾಪನೆ.
ಶಕ್ತಿ ಯೋಜನೆಗೆ 5300 ಕೋಟಿ ಮೀಸಲುರಾಜ್ಯದ ಐದು ಗ್ಯಾರಂಟಿಗಳಲ್ಲಿ ಒಂದಾದ ಶಕ್ತಿ ಯೋಜನೆಗೆ ಈ ವರ್ಷ 5,300 ಕೋಟಿ ಮೀಸಲು.
ಮೈಸೂರು ರಾಜ್ಯದ ಎರಡನೇ ಐಟಿ ಸಿಟಿಯಾಗಿ ನಿರ್ಮಾಣ.
ಮೈಸೂರನ್ನು ರಾಜ್ಯದ ಎರಡನೇ ಐಟಿ ಸಿಟಿಯಾಗಿ ನಿರ್ಮಾಣ ಮಾಡಲು ಈ ಬಾರಿ ಬಜೆಟ್ನಲ್ಲಿ ತೀರ್ಮಾನ ಮಾಡಲಾಗಿದೆ.
ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ ವೃದ್ಧಾಶ್ರಮಅಲ್ಪಸಂಖ್ಯಾತ ಸಮುದಾಯದ ಮಹಿಳೆಯರಿಗಾಗಿ 100 ಸಂಖ್ಯಾ ಬಲದ ಎರಡು ಮಹಿಳಾ ವೃದ್ದಾಶ್ರಮ ಪ್ರಾರಂಭ.
ಅಲ್ಪ ಸಂಖ್ಯಾತ ವಿದ್ಯಾರ್ಥಿಗಳಿಗೆ 5000 ವಿದ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ಖರೀದಿಗೆ ತಲಾ 50 ಸಾವಿರ ರೂ. ನೀಡುವುದಾಗಿ ಸರ್ಕಾರ ಘೋಷಣೆ.
ಗ್ಯಾರಂಟಿ ಯೋಜನೆಗೆ 1,21,598 ಕೋಟಿ ರೂ. ವ್ಯಯಗ್ಯಾರಂಟಿ ಯೋಜನೆ ಜಾರಿಯಾದಾಗಿನಿಂದ ಫೆಬ್ರವರಿ 2026 ರ ವರೆಗೆ 1,21,598 ಕೋಟಿ ವ್ಯಯ ಮಾಡಿದೆ.
12 ಹೊಸ ಪೊಲೀಸ್ ಠಾಣೆ ಆರಂಭರಾಜ್ಯದಲ್ಲಿ ಈಗಿರುವ ಪೊಲೀಸ್ ಠಾಣೆಗಳ ಜೊತೆಗೆ ಮತ್ತೆ 12 ಹೊಸ ಪೊಲೀಸ್ ಠಾಣೆಯನ್ನು ಬಜೆಟ್ ಘೋಷಣೆ ಮಾಡಲಾಗಿದೆ.
ಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಾಣಸಿರಿಧಾನ್ಯ ಉತ್ಪನ್ನ ಉತ್ತೇಜನಕ್ಕಾಗಿ ಮಿಲೆಟ್ ಹಬ್ ನಿರ್ಮಿಸಲಾಗುತ್ತದೆ.
100 ಕೋಟಿ ರೂಪಾಯಿ ವೆಚ್ಚದಲ್ಲಿ ಮುಖ್ಯಮಂತ್ರಿ ಕೃಷಿ ವಿಸ್ತಾರ ಯೋಜನೆ ಜಾರಿ ಮಾಡಲಾಗುತ್ತದೆ.ಮಣ್ಣಿನ ಗುಣಮಟ್ಟ ಹೆಚ್ಚಿಸಲು ವಸುಧಾಮೃತ ಯೋಜನೆ ಜಾರಿ ಮಾಡಲಾಗುತ್ತದೆ.ಮುಂದಿನ ಮೂರು ವರ್ಷದಲ್ಲಿ ಸಸ್ಯ ಸಂಜೀವಿನಿ ಯೋಜನೆ ಜಾರಿ ಮಾಡಲಾಗುತ್ತದೆ.
ಕೃಷಿ ಮಾಹಿತಿಗಾಗಿ AI ತಂತ್ರಜ್ಞಾನ ಆಧಾರಿತ ರೈತ ಕರೆ ಕೇಂದ್ರ ಸ್ಥಾಪನೆ ಮಾಡಲಾಗುತ್ತದೆ. ಚಿತ್ರದುರ್ಗದಲ್ಲಿ ಕೃಷಿ ಉದ್ದಿಮೆ ತರಬೇತಿ ಕೇಂದ್ರ ಉನ್ನತೀಕರಣಗೊಳಿಸಲಾಗುತ್ತದೆ.
“ಬೆಂಗಳೂರಲ್ಲಿ ವೈಟ್ ಟಾಪಿಂಗ್ಗೆ 1700 ಕೋಟಿರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ವೈಟ್ ಟಾಪಿಂಗ್ಗೆ 1700 ಕೋಟಿ ಅನುದಾನ ನೀಡಲಾಗಿದೆ. 158 ಕಿ.ಮೀ ವೈಟ್ ಟಾಪಿಂಗ್ ಘೋಷಣೆ ಮಾಡಿದ್ದು, ವಾಹನ ಸವಾರರಿಗೆ ಅನುಕೂಲವಾಗಲಿದೆ.
ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲುಪ್ರಸಕ್ತ ಸಾಲಿನಲ್ಲಿ ಗೃಹಲಕ್ಷ್ಮೀ ಯೋಜನೆಗೆ 28,608 ಕೋಟಿ ರೂ. ಹಣ ಮೀಸಲಿಡಲಾಗುವುದು.
ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹ ಗುರಿಪ್ರಸಕ್ತ ಸಾಲಿನ ಬಜೆಟ್’ನಲ್ಲಿ ಸಾರಿಗೆ ಇಲಾಖೆಗೆ 15,500 ಕೋಟಿ ರೂ. ತೆರಿಗೆ ಸಂಗ್ರಹಣೆ ಗುರಿ ನೀಡಲಾಗಿದೆ.
ನೊಂದಣಿ ಹಾಗೂ ಮುದ್ರಾಂಕ ಇಲಾಖೆಗೆ 29 ಸಾವಿರ ಕೋಟಿ ರಾಜಸ್ವ ಗುರಿ.
ಅಬಕಾರಿ ಇಲಾಖೆ ಇಲಾಖೆಯಲ್ಲಿ 45,000 ಕೋಟಿ ರೂ. ಆದಾಯ ಗುರಿ ನೀಡಲಾಗಿದೆ.
800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆಪ್ರಸಕ್ತ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಇಲಾಖೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿ ಒತ್ತು ನೀಡುವ ಉದ್ದೇಶದಿಂದ 800 ಕರ್ನಾಟಕ ಪಬ್ಲಿಕ್ ಶಾಲೆ ಘೋಷಣೆ ಮಾಡಲಾಗಿದೆ. ಇದು ಮಕ್ಕಳ ಉನ್ನತ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಲಾಗಿದೆ.
56 ಸಾವಿರ ಉದ್ಯೋಗ ಭರ್ತಿರಾಜ್ಯದಲ್ಲಿ ನಿರುದ್ಯೋಗಿಗಳಿಗೆ ಈ ಬಾರಿ ಬಜೆಟ್ನಲ್ಲಿ ಗುಡ್ ನ್ಯೂಸ್ ಸಿಕ್ಕಿದೆ. 56 ಸಾವಿರ ಉದ್ಯೋಗ ಭರ್ತಿ ಮಾಡಲಾಗುತ್ತದೆ.
ಯು.ಆರ್ ಅನಂತ ಮೂರ್ತಿ ಹೆಸರಿನಲ್ಲಿ ಅಧ್ಯಯನ ಪೀಠ.
ಚಿಕ್ಕಮಗಳೂರಿನ ಮುಳ್ಳಯ್ಯನಗಿರಿ ಸೀತಾಳಯ್ಯನಗಿರಿಯಿಂದ ಕೈಮರದವರೆಗೆ ರೋಪ್ ವೇ ನಿರ್ಮಾಣ. ಪಿಪಿಪಿ ಮಾದರಿಯಲ್ಲಿ ರೋಪ್ ವೇ .
ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂ; ವಲಯವಾರು ವಿಂಗಡಣೆ ಮಾಡಿ ಮಂಡನೆ2026-27ನೇ ಸಾಲಿನ ರಾಜ್ಯ ಬಜೆಟ್ ಗಾತ್ರ 4 ಲಕ್ಷ ಕೋಟಿ ರೂಪಾಯಿ ಆಗಿದ್ದು, ಈ ಬಾರಿಯೂ ವಲಯವಾರು ವಿಂಗಡಣೆ ಮಾಡಿ ಮುಖ್ಯಮಂತ್ರಿ ಸಿದ್ಜರಾಮಯ್ಯ ಅವರು ಪ್ರಸಕ್ತ ಸಾಲಿನ ಬಜೆಟ್ ಮಂಡನೆ ಮಾಡುತ್ತಿದ್ದಾರೆ.



