ಶಿವಮೊಗ್ಗ, ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಮಂಡಿಸಿದ ಇಂದಿನ ಬಜೆಟ್ ಅಭಿವೃದ್ಧಿಗಿಂತಲೂ ಅಲ್ಪಸಂಖ್ಯಾತರ ಓಲೈಕೆ ಬಜೆಟ್ ಆಗಿ ಕಾಣುತ್ತಿದೆ.
ರಾಜ್ಯದ ಅಭಿವೃದ್ಧಿ, ಉದ್ಯೋಗ ಮತ್ತು ಮೂಲಸೌಕರ್ಯಕ್ಕೆ ಸ್ಪಷ್ಟ ದಿಕ್ಕು ಇಲ್ಲದೆ, ಜನರ ನಿರೀಕ್ಷೆಗಳನ್ನು ಈಡೇರಿಸಲು ಈ ಸರ್ಕಾರ ವಿಫಲವಾಗಿದೆ ಎಂದು ದೂರಿದ್ದಾರೆ .
ಸಾಮಾನ್ಯ ಜನರ ಸಮಸ್ಯೆಗಳಿಗೆ ಪರಿಹಾರ ನೀಡದ ಈ ಬಜೆಟ್ ನಿರಾಶೆ ಉಂಟುಮಾಡಿದೆ ಎಂದು ಬಿಜೆಪಿ ಜಿಲ್ಲಾ ಸಾಮಾಜಿಕ ಜಾಲತಾಣ ಜಿಲ್ಲಾ ಸಂಚಾಲಕರಾದ ಶರತ್ ಎಸ್. ವಿ. ಕಲ್ಯಾಣಿ ಅಭಿಪ್ರಾಯಪಟ್ಟಿದ್ದಾರೆ .



