ಬೆಂಗಳೂರು, ಕರ್ನಾಟಕ ಪೊಲೀಸ್ ಇಲಾಖೆಯಲ್ಲಿ ದಶಕಗಳಿಂದ ಬೇರೂರಿದ್ದ ಬ್ರಿಟಿಷ್ ಕಾಲದ ಆರ್ಡರ್ಲಿ ಪದ್ಧತಿಗೆ ರಾಜ್ಯ ಸರ್ಕಾರ ಅಧಿಕೃತವಾಗಿ ಮಂಗಳ ಹಾಡಿದೆ. ಕಠಿಣ ತರಬೇತಿ ಪಡೆದು ಜನಸೇವೆಗೆ ಸಜ್ಜಾದ ಪೊಲೀಸ್ ಸಿಬ್ಬಂದಿಯನ್ನು ಹಿರಿಯ ಅಧಿಕಾರಿಗಳ ವೈಯಕ್ತಿಕ ಕೆಲಸಗಳಿಗೆ ಬಳಸಿಕೊಳ್ಳುವುದನ್ನು ಇನ್ನು ಮುಂದೆ ಸಂಪೂರ್ಣವಾಗಿ ನಿಷೇಧಿಸಿ ಹೊಸ ಆದೇಶ ಹೊರಡಿಸಲಾಗಿದೆ.
ಫೆಬ್ರವರಿ ತಿಂಗಳಿನಿಂದ ಜಾರಿಗೆ ಬಂದಿರುವ ಈ ದ ನಿಯಮದ ಪ್ರಕಾರ, ಯಾವುದೇ ಕಾನ್‌ಸ್ಟೇಬಲ್ ಅಥವಾ ಹೆಡ್ ಕಾನ್‌ಸ್ಟೇಬಲ್‌ಗಳನ್ನು ಹಿರಿಯ ಅಧಿಕಾರಿಗಳ ಅಧೀನದಲ್ಲಿ ಮನೆಕೆಲಸಕ್ಕಾಗಿ ನಿಯೋಜಿಸುವಂತಿಲ್ಲ.
ಅಪರಾಧ ತನಿಖೆ, ಕಾನೂನು ಸುವ್ಯವಸ್ಥೆ ಮತ್ತು ಶಸ್ತ್ರಾಸ್ತ್ರ ನಿರ್ವಹಣೆಯಂತಹ ಗಂಭೀರ ಜವಾಬ್ದಾರಿಗಳನ್ನು ಹೊರಬೇಕಾದ ಸಿಬ್ಬಂದಿಯನ್ನು ಇನ್ನು ಮುಂದೆ ಕೇವಲ ಮೂಲ ಪೊಲೀಸ್ ಕರ್ತವ್ಯಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳಲಾಗುವುದು ಎಂದು ಸರ್ಕಾರ ಸ್ಪಷ್ಟಪಡಿಸಿದೆ.



