ದಾವಣಗೆರೆ ದಕ್ಷಿಣ, ಬಾಗಲಕೋಟೆ ಉಪ ಚುನಾವಣೆ ; ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ, ಸಚಿವ ಮಧು ಬಂಗಾರಪ್ಪ ಸೇರಿ 31 ಮಂದಿಗೆ ಜವಾಬ್ದಾರಿ

ರಾಜಕೀಯ

ದಾವಣಗೆರೆ ದಕ್ಷಿಣ ಹಾಗೂ ಬಾಗಲಕೋಟೆ ಉಪ ಚುನಾವಣೆಗೆ ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ.ಸಚಿವರು ಸೇರಿದಂತೆ 31 ಮಂದಿಗೆ ಜವಾಬ್ದಾರಿ; ಶೀಘ್ರದಲ್ಲಿಯೇ ಸ್ಥಳೀಯವಾಗಿ ಸಭೆ ನಡೆಸಿ ವರದಿಗೆ ಸೂಚನೆ.

ಸಮಿತಿ ಸದದ್ಯರು ಅಭ್ಯರ್ಥಿ ಆಯ್ಕೆಯ ಜತೆಗೆ ಗೆಲುವಿಗೆ ಕಾರ್ಯತಂತ್ರ ರೂಪಿಸಬೇಕಿದೆ.ದಾವಣಗೆರೆ ದಕ್ಷಿಣ , ಬಾಗಲಕೋಟೆ ವಿಧಾನಸಭಾ ಚುನಾವಣೆ ಕಾಂಗ್ರೆಸ್‌ ಉಸ್ತುವಾರಿ ಸಮಿತಿ ರಚನೆ.

ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್‌ನಿಂದ ಉಸ್ತುವಾರಿ ಸಮಿತಿ ರಚನೆ ಮಾಡಿ ಕೆಪಿಸಿಸಿಸ ಅಧ್ಯಕ್ಷರು ಆದೇಶ ಹೊರಡಿಸಿದ್ದಾರೆ. ಸಚಿವರು ಸೇರಿದಂತೆ 31 ಮಂದಿಗೆ ಜವಾಬ್ದಾರಿ ನೀಡಲಾಗಿದೆ.

ಶಾಮನೂರು ಶಿವಶಂಕರಪ್ಪ ನಿಧನದ ಬಳಿಕ ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರ, ವೈಎಸ್ ಮೇಟಿ ನಿಧನದ ಬಳಿಕ ಬಾಗಲಕೋಟೆ ವಿಧಾನಸಭಾ ಕ್ಷೇತ್ರ ತೆರವಾಗಿದ್ದವು. ಮುಂದಿನ 2-3 ತಿಂಗಳಲ್ಲಿ ಚುನಾವಣೆ ನಡೆಸಲು ಚುನಾವಣಾ ಆಯೋಗ ಮುಂದಾಗಿದೆ. ಈ ಹಿನ್ನೆಲೆ ಉಸ್ತುವಾರಿ ಸಮಿತಿ ನೇಮಕ ಮಾಡಲಾಗಿದೆ.

ಈ ಸಮಿತಿಯು ಅಭ್ಯರ್ಥಿಗಳ ಆಯ್ಕೆ, ಅಭ್ಯರ್ಥಿಗಳ ಗೆಲುವಿನ ಕಾರ್ಯತಂತ್ರ ರೂಪಿಸುವ ಬೇಕಿದೆ.ಈ ಬಗ್ಗೆ ಆದೇಶ ಹೊರಡಿಸಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ” ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯಲಿರುವ ಹಿನ್ನಲೆಯಲ್ಲಿ, ನಮ್ಮ ಪಕ್ಷದ ಅಭ್ಯರ್ಥಿ ಆಯ್ಕೆ ಪ್ರಕ್ರಿಯೆಗಾಗಿ ಹಾಗೂ ನಮ್ಮ ಅಭ್ಯರ್ಥಿಯು ಜಯಶಾಲಿಯಾಗಲು ಅಗತ್ಯ ಚುನಾವಣಾ ತಂತ್ರಗಳನ್ನು ರೂಪಿಸುವ ಸಲುವಾಗಿ ಎಐಸಿಸಿ ನಿರ್ದೇಶನದ ಮೇರೆಗೆ ದಾವಣಗೆರೆ ದಕ್ಷಿಣ ವಿಧಾನಸಭೆ ಉಪಚುನಾವಣೆ ಉಸ್ತುವಾರಿ ಸಮಿತಿಯನ್ನು ರಚಿಸಲಾಗಿದೆ ” ಎಂದು ತಿಳಿಸಿದ್ದಾರೆ.

ಕೂಡಲೇ ವರದಿಗೆ ಸೂಚನೆ ನೀಡಿದ ಡಿಕೆಶಿ ಸಮಿತಿ ಕ್ಷೇತ್ರದಲ್ಲಿ ನಮ್ಮ ಪಕ್ಷದ ಸಂಭಾವ್ಯ ಅಭ್ಯರ್ಥಿಯನ್ನು ಕೆಪಿಸಿಸಿಗೆ ಶಿಫಾರಸ್ಸು ಮಾಡಬೇಕು. ಉಪಚುನಾವಣೆಯಲ್ಲಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಅಗತ್ಯವಾದ ಕ್ರಮಗಳನ್ನು ಕೈಗೊಳ್ಳುವ ಪ್ರಕ್ರಿಯೆಯಲ್ಲಿ ದಾವಣಗೆರೆ, ಬಾಗಲಕೋಟೆ ಜಿಲ್ಲೆಯ ಸಚಿವರು, ಸಂಸದರು, ಶಾಸಕರು, ಎಐಸಿಸಿ ಉಸ್ತುವಾರಿ ಕಾಯದರ್ಶಿಗಳು, ಜಿಲ್ಲಾ/ ಬ್ಲಾಕ್ ಅಧ್ಯಕ್ಷರು, ಮಾಜಿ ಶಾಸಕರು, ಎಐಸಿಸಿ/ ಕೆಪಿಸಿಸಿ ಪದಾಧಿಕಾರಿಗಳು, ಹಿರಿಯ ಮುಖಂಡರು, ಜಿಲ್ಲಾ ಮುಂಚೂಣಿ ಘಟಕ, ಸೆಲ್ ಅಧ್ಯಕ್ಷರು ಹಾಗೂ ಇತರರೊಂದಿಗೆ ಸಮಾಲೋಚನೆ ನಡೆಸಿ ತಕ್ಷಣ ಕೆಪಿಸಿಸಿಗೆ ವರದಿಯನ್ನು ಸಲ್ಲಿಸಬೇಕು ಎಂದು ಆದೇಶದಲ್ಲಿ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.

ದಾವಣಗೆರೆ ದಕ್ಷಿಣ ಉಪ ಚುನಾವಣೆ ಉಸ್ತುವಾರಿ ಸಮಿತಿ ಸದಸ್ಯರುಹೆಸರು ಮತ್ತು ಹುದ್ದೆಮಂಜುನಾಥ್ ಭಂಡಾರಿ, ಎಂ.ಎಲ್.ಸಿ/ಡಬ್ಲ್ಯೂ.ಪಿ, ಕೆ.ಪಿ.ಸಿ.ಸಿ – ಸಂಚಾಲಕರುಎಸ್.ಎಸ್. ಮಲ್ಲಿಕಾರ್ಜುನ, ಜಿಲ್ಲಾ ಉಸ್ತುವಾರಿ ಸಚಿವರುಕೆ.ಎಚ್. ಮುನಿಯಪ್ಪ, ಸಚಿವರುಜಮೀರ್ ಅಹಮದ್ ಖಾನ್, ಸಚಿವರುಈಶ್ವರ್ ಖಂಡ್ರೆ, ಸಚಿವರುಕೃಷ್ಣ ಬೈರೇಗೌಡ, ಸಚಿವರುಶರಣಪ್ರಕಾಶ್ ಪಾಟೀಲ್, ಸಚಿವರುಪ್ರಿಯಾಂಕ್ ಖರ್ಗೆ, ಸಚಿವರುಮತಿ ಲಕ್ಷ್ಮಿ ಹೆಬ್ಬಾಳ್ಕರ್, ಸಚಿವರುಸಂತೋಷ್ ಲಾಡ್, ಸಚಿವರುಮಧು ಬಂಗಾರಪ್ಪ, ಸಚಿವರು, ಸಲೀಂ ಅಹಮದ್, ಮುಖ್ಯ ಸಚೇತಕರು, ವಿಧಾನ ಪರಿಷತ್.

Author