ಶಿವಮೊಗ್ಗ, ಶ್ರೀಗಂಧ ಸಾಂಸ್ಕೃತಿಕ ಸಂಸ್ಥೆ, ಶಿವಮೊಗ್ಗ ವತಿಯಿಂದ ಮಾರ್ಚ್ 31ರಂದು ಶಿವಮೊಗ್ಗದ ಕುವೆಂಪು ರಂಮಂದಿರದಲ್ಲಿ ವಿಶೇಷ ಉಪನ್ಯಾಸ ಏರ್ಪಡಿಸಲಾಗಿದೆ.ಜಂಟಿ ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾತನಾಡಿದ ಶ್ರೀಗಂಧದ ಅಧ್ಯಕ್ಷ ಕೆ ಎಸ್ ಈಶ್ವರಪ್ಪ, ಮತ್ತು ಅರ್ಚಕ ಸಂದೇಶ್ ಉಪಾಧ್ಯ, ವಿಷ್ಣು ಸಹಸ್ರನಾಮ ಟ್ರಸ್ಟಿನ ರಾಮಾಚಾರ್ ಜೋಯಿಸ್, ನಗರದ ಶ್ರೀಗಂಧ ಸಂಸ್ಥೆಯಿಂದ ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್, ಬೆಂಗಳೂರು ಹಾಗೂ ಭಜನಾ ಪರಿಷತ್ ಶಿವಮೊಗ್ಗ ಇವರ ಸಹಯೋಗದಲ್ಲಿ ಮಾರ್ಚ್ 31ರ ಮಂಗಳವಾರ ಸಂಜೆ 4.30 ಕ್ಕೆ ಸಂಜೆ ಕುವೆಂಪು ರಂಗಮಂದಿರದಲ್ಲಿ ವಿಶೇಷ ಉಪನ್ಯಾಸ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದರು.
ಪೇಜಾವರ ಮಠದ ವಿಶ್ವ ಪ್ರಸನ್ನ ಶ್ರೀಪಾದರು ಹಾಗೂ ಬಾಳಗಾರು ಮಠದ ಕಿರಿಯ ಪೀಠಾಧಿಪತಿಗಳಾದ ಅಕ್ಟೋಭ್ಯ ರಾಮಪ್ರಿಯತೀರ್ಥ ಶ್ರೀಪಾದರು ಸಾನ್ನಿಧ್ಯ ವಹಿಸಿ ಉಪನ್ಯಾಸ ನೀಡಲಿದ್ದಾರೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಾಜಿ ಉಪ ಮುಖ್ಯಮಂತ್ರಿ , ಶ್ರೀಗಂಧ ಸಂಸ್ಥೆಯ ಅಧ್ಯಕ್ಷ ಕೆ. ಎಸ್. ಈಶ್ವರಪ್ಪ ವಹಿಸಲಿದ್ದು ವಿಷ್ಣು ಸಹಸ್ರನಾಮ ಗ್ಲೋಬಲ್ ಟ್ರಸ್ಟ್ ನ ಶಿವಮೊಗ್ಗ ಘಟಕದ ಅಧ್ಯಕ್ಷ ಜೋಯಿಸ್ ರಾಮಾಚಾರ್, ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಹಾಗೂ ಶ್ರೀಗಂಧ ಸಂಸ್ಥೆಯ ಕೋಶಾಧ್ಯಕ್ಷ ಕೆ. ಈ. ಕಾಂತೇಶ್, ಭಜನಾ ಪರಿಷತ್ ಅಧ್ಯಕ್ಷ ಸಂದೇಶ್ ಉಪಾಧ್ಯ ಉಪಸ್ಥಿತರಿರಲಿದ್ದಾರೆ ಎಂದರು.ಅಧ್ಯಾತ್ಮ ಮತ್ತು ಸಂಸ್ಕೃತಿಯ ಪ್ರಸಾರಕ್ಕಾಗಿ ಹಮ್ಮಿಕೊಳ್ಳಲಾಗಿರುವ ಈ ಕಾರ್ಯಕ್ರಮಕ್ಕೆ ಭಜನಾ ಮಂಡಳಿಗಳ ಮಾತೆಯರು ಸೇರಿದಂತೆ ಸಾವಿರಾರು ಜನರು ಪಾಲ್ಗೊಳ್ಳುವರು ಎಂದರು.



