ಚಿತ್ರದುರ್ಗದ ಬಳಿ ನಡೆದ ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸರ್ಕಾರಿ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ಅಪಘಾತದ ತೀವ್ರತೆಗೆ ಕಾರ್ ಟಾಪ್ ಕಿತ್ತಿದ್ದು, ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದೆ.ಮೃತ ಮೂವರು ರಿಸರ್ವ್ ಸಬ್ ಇನ್ಸ್ಪೆಕ್ಟರ್, ಗಾಯಾಳುಗಳು ಎಸ್ಐ ಎಂದು ತಿಳಿದು ಬಂದಿದೆ.

ಐವರು ಒಂದೇ ಕಾರ್ನಲ್ಲಿ ಬೆಂಗಳೂರಿನಿಂದ ಬಳ್ಳಾರಿಗೆ ತೆರಳುತ್ತಿದ್ದರು. ಮೃತರನ್ನು ಮಂಜುನಾಥ್, ಅಂಬರೀಷ್ ಮತ್ತು ಸಚಿನ್ ಎಂದು ಗುರುತಿಸಲಾಗಿದೆ.
ಗಾಯಾಳುಗಳಾದ ಈಶ್ವರ್ ಮತ್ತು ಮಹಾಂತೇಶ್ ಗಾಯಗೊಂಡಿದ್ದಾರೆ. ಲಾರಿಗೆ ಕಾರ್ ಡಿಕ್ಕಿ ಹೊಡೆದಿದ್ದು, ಅಪಘಾತಕ್ಕೆ ನಿಖರ ಕಾರಣ ತಿಳಿದು ಬಂದಿಲ್ಲ. ಐಮಂಗಲ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪಘಾತ ಸಂಭವಿಸಿದೆ.



