ಸಾಗರ | ಹಾವು ಕಚ್ಚಿ ರೈತ ಸಾವು

ಶಿವಮೊಗ್ಗ

ಸಾಗರ ತಾಲ್ಲೂಕಿನ ಆನಂದಪುರ ಸಮೀಪದ ಗ್ರಾಮವೊಂದರಲ್ಲಿ ಹಾವಿನ ಕಡಿತಕ್ಕೆ ಸಿಲುಕಿ ರೈತರೊಬ್ಬರು ಮೃತಪಟ್ಟಿರುವ ಘಟನೆ ಸಂಭವಿಸಿದೆ.

ಮೃತರನ್ನು ಹುಚ್ಚಪ್ಪ ಎಂದು ಗುರುತಿಸಲಾಗಿದ್ದು, ಮಂಗಳವಾರ ರಾತ್ರಿ ಈ ಘಟನೆ ನಡೆದಿದೆ.ಹುಚ್ಚಪ್ಪ ಅವರು ಮಾರ್ಚ್ 17ರ ರಾತ್ರಿ ಸುಮಾರು 8:30ರ ವೇಳೆಗೆ ತಮ್ಮ ತೋಟಕ್ಕೆ ನೀರು ಹಾಯಿಸಲು ತೆರಳಿದ್ದರು.

ಈ ಸಂದರ್ಭದಲ್ಲಿ ಅನಿರೀಕ್ಷಿತವಾಗಿ ಯಾವುದೋ ವಿಷಪೂರಿತ ಹಾವು ಅವರ ಎಡಗಾಲಿಗೆ ಕಚ್ಚಿದೆ. ತಕ್ಷಣ ಅವರು ಮನೆಗೆ ಮರಳಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆಯೇ ಕುಟುಂಬದವರು ಅವರಿಗೆ ಪ್ರಾಥಮಿಕ ಚಿಕಿತ್ಸೆ ನೀಡಿ, ಕೂಡಲೇ ಆನಂದಪುರ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದರು.

ಆದರೆ, ದುರದೃಷ್ಟವಶಾತ್ ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 9:45ರ ಸುಮಾರಿಗೆ ಹುಚ್ಚಪ್ಪ ಅವರು ಕೊನೆಯುಸಿರೆಳೆದಿದ್ದಾರೆ.

Author