ಬಾಗಲಕೋಟೆ, ದಾವಣಗೆರೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಕಣ ರಂಗೇರಿದ್ದು, ಸೋಮವಾರ ಬಾಗಲಕೋಟೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಮೇಶ್ ಮೇಟಿ ಹಾಗೂ ಬಿಜೆಪಿ ಅಭ್ಯರ್ಥಿಯಾಗಿ ವೀರಣ್ಣ ಚರಂತಿಮಠ ತಮ್ಮ ಉಮೇದುವಾರಿಕೆ ಸಲ್ಲಿಸಿದ್ದಾರೆ.
ಉಮೇಶ್ ಮೇಟಿ ಅವರು ಜಿಲ್ಲಾ ಉಸ್ತುವಾರಿ ಸಚಿವ ಆರ್. ಬಿ. ತಿಮ್ಮಾಪುರ ಹಾಗೂ ಮಾಜಿ ಸಚಿವ ಅಜಯಕುಮಾರ್ ಸರನಾಯಕ ಅವರ ಉಪಸ್ಥಿತಿಯಲ್ಲಿ ತಮ್ಮ ನಾಮಪತ್ರ ಸಲ್ಲಿಸಿದರು.

ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಮುಗಿದ ಬಳಿಕ ಸೋಮವಾರ ಮಧ್ಯಾಹ್ನ ಕಾಂಗ್ರೆಸ್ ಪಕ್ಷದ ವತಿಯಿಂದ ಬೃಹತ್ ಬಹಿರಂಗ ಸಭೆಯನ್ನು ಏರ್ಪಡಿಸಲಾಗಿತ್ತು.
ಈ ಸಮಾವೇಶದಲ್ಲಿ CM ಸಿದ್ದರಾಮಯ್ಯ, DCM ಡಿ. ಕೆ. ಶಿವಕುಮಾರ್, ಮತ್ತು ಸಚಿವ ಸತೀಶ್ ಜಾರಕಿಹೊಳಿ ಸೇರಿದಂತೆ ಘಟಾನುಘಟಿ ನಾಯಕರು ಭಾಗವಹಿಸಿದರು.

ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹಾಗೂ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಸೋಮವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ.



