ದಾವಣಗೆರೆ ಉಪಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಮರ್ಥ್ ಮಲ್ಲಿಕಾರ್ಜುನ್ ಶಾಮನೂರು ಸೋಮವಾರ ನಾಮಪತ್ರ ಸಲ್ಲಿಸಿದರು. ದಾವಣಗೆರೆ ದಕ್ಷಿಣ ಮತಕ್ಷೇತ್ರದ ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್-ಬಿಜೆಪಿ ನಡುವೆ ಜಿದ್ದಾಜಿದ್ದಿ ಏರ್ಪಟ್ಟಿದೆ.
ಬಿಜೆಪಿ ಅಭ್ಯರ್ಥಿ ಶುಕ್ರವಾರ ನಾಮಪತ್ರ ಸಲ್ಲಿಕೆ ಮಾಡಿದ್ದರು.
ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಟಿಕೆಟ್ ವಿಚಾರಕ್ಕೆ ಸಂಬಂಧಿಸಿದಂತೆ ಮುಸ್ಲಿಂ ಸಮುದಾಯದಲ್ಲಿ ಅಸಮಾಧಾನ ಉಂಟಾಗಿದ್ದು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅಲ್ಪಸಂಖ್ಯಾತ ಸಮುದಾಯಕ್ಕೆ ಸೂಕ್ತ ಪ್ರಾತಿನಿಧ್ಯ ನೀಡಲಾಗುವುದು, ಅಸಮಾಧಾನ ಬಗೆಹರಿಸಲಾಗುವುದು ಎಂದು ಹೇಳಿದ್ದಾರೆ.



