ಶಿವಮೊಗ್ಗ, ಮಾದಿಗ ಸಂಘಟನೆಗಳ ಒಕ್ಕೂಟವು ಒಳಮೀಸಲಾತಿ ಜಾರಿಗೆ ಒತ್ತಾಯಿಸಿ ಇಂದು ಜಿಲ್ಲಾಧಿಕಾರಿ ಕಚೇರಿ ಎದುರು ಭಾರಿ ಪ್ರತಿಭಟನೆ ನಡೆಸಿತು.
ಸಂಘಟನೆಗಳ ಪ್ರಕಾರ, ಪರಿಶಿಷ್ಟ ಜಾತಿಗಳ ಮೀಸಲಾತಿ 101 ಜಾತಿಗಳ ನಡುವೆ ಸಮನಾಗಿ ಹಂಚಿಕೆಯಾಗದ ಹಿನ್ನೆಲೆಯಲ್ಲಿ ಕಳೆದ 35 ವರ್ಷಗಳಿಂದ ಒಳಮೀಸಲಾತಿ ವರ್ಗೀಕರಣಕ್ಕಾಗಿ ಹೋರಾಟ ನಡೆಯುತ್ತಿದೆ.
ಸುಪ್ರೀಂ ಕೋರ್ಟ್ 01/08/2024ರಂದು ನೀಡಿದ ತೀರ್ಪಿನ ಅನ್ವಯ ರಾಜ್ಯ ಸರ್ಕಾರಕ್ಕೆ ಮೀಸಲಾತಿ ವರ್ಗೀಕರಣದ ಅಧಿಕಾರವಿದ್ದರೂ, ಸರ್ಕಾರವು ಅದನ್ನು ಜಾರಿಗೆ ತರದೆ 27/02/2026ರಂದು ಹಳೆಯ ರೋಸ್ಟರ್ ಪದ್ಧತಿಯಂತೆ 56,432 ಹುದ್ದೆಗಳ ನೇಮಕಾತಿಗೆ ಸುತ್ತೋಲೆ ಹೊರಡಿಸಿರುವುದು ಕಾನೂನುಬಾಹಿರ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಒಳಮೀಸಲಾತಿ ಜಾರಿಗೆ ಯಾವುದೇ ತಾಂತ್ರಿಕ ಅಡಚಣೆ ಅಥವಾ ನ್ಯಾಯಾಲಯದ ತಡೆಯಾಜ್ಞೆ ಇಲ್ಲದಿದ್ದರೂ ಸರ್ಕಾರ ವಿಳಂಬ ಧೋರಣೆ ಅನುಸರಿಸುತ್ತಿದೆ ಎಂದು ಸಂಘಟನೆಗಳು ಆರೋಪಿಸಿದವು.
ಈ ಹಿನ್ನೆಲೆಯಲ್ಲಿ ಸಮುದಾಯದ ಉದ್ಯೋಗಾವಕಾಶಗಳು ಕಳೆದು ಹೋಗುವ ಭೀತಿ ವ್ಯಕ್ತವಾಗಿದೆ ಎಂದರು.
ಮುಖ್ಯ ಹಕ್ಕೊತ್ತಾಯಗಳು
56,432 ಹುದ್ದೆಗಳ ನೇಮಕಾತಿ ಸುತ್ತೋಲೆಯನ್ನು ತಕ್ಷಣ ಹಿಂಪಡೆಯಬೇಕುಒಳಮೀಸಲಾತಿ ಜಾರಿ ಮಾಡಿ ಜನಸಂಖ್ಯೆ ಅನುಗುಣ ಉದ್ಯೋಗ ಹಂಚಿಕೆ ಮಾಡಬೇಕು.
ವಿಶ್ವವಿದ್ಯಾಲಯಗಳನ್ನು ಒಂದೇ ಘಟಕವಾಗಿ ಪರಿಗಣಿಸುವ ಕ್ರಮ ಕೈಬಿಡಬೇಕುಅಲೆಮಾರಿ ಸಮುದಾಯಗಳಿಗೆ ಪ್ರತ್ಯೇಕ ಮೀಸಲಾತಿ ನೀಡಬೇಕುಎಸ್ಸಿ/ಎಸ್ಟಿ ಮೀಸಲಾತಿ ಪ್ರಮಾಣ ಹೆಚ್ಚಿಸಿ ಸಂವಿಧಾನದ 9ನೇ ಅನುಸೂಚಿಗೆ ಸೇರಿಸಬೇಕುಗುತ್ತಿಗೆ ಪೌರಕಾರ್ಮಿಕರನ್ನು ಖಾಯಂಗೊಳಿಸಬೇಕು.
ಸಾಮಾಜಿಕ ನ್ಯಾಯ ಕೇವಲ ಘೋಷಣೆಯಾಗದೇ ಸಂವಿಧಾನಬದ್ಧ ಹಕ್ಕು ಎಂದು ಸಂಘಟನೆಗಳು ಒತ್ತಿ ಹೇಳಿದ್ದು, ಸರ್ಕಾರ ತಕ್ಷಣ ಕ್ರಮ ಕೈಗೊಳ್ಳದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಹೋರಾಟ ತೀವ್ರಗೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.



