RCB ಹೆಸರು ಬದಲಾವಣೆ ಆಗತ್ತಾ?

ಕ್ರೀಡೆ

ಆದಿತ್ಯ ಬಿರ್ಲಾ ಸಮೂಹ ಸುಮಾರು 16,706 ಕೋಟಿ ರೂಪಾಯಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಫ್ರ್ಯಾಂಚೈಸಿಯನ್ನು ಖರೀದಿ ಮಾಡಿದೆ.

ಇವರ ಜೊತೆ ಬ್ಲ್ಯಾಕ್‌ಸ್ಟೋನ್ ಇಕ್ವಿಟಿ ಫರ್ಮ್‌, ಅಮೆರಿಕದ ಹೂಡಿಕೆದಾರ ಡೇವಿಡ್‌ ಬ್ಲಿಟ್ಝರ್ ಒಡೆತನದ ಬೋಲ್ಟ್‌ ವೆಂಚರ್ಸ್‌ ಮತ್ತು ಟೈಮ್ಸ್‌ ಆಫ್‌ ಇಂಡಿಯಾ ಮಾಧ್ಯಮ ಸಮೂಹ ಕೂಡ ಖರೀದಿಯಲ್ಲಿ ಕೈ ಜೋಡಿಸಿದೆ.

ಈಗ ಆರ್​​ಸಿಬಿ ಹೆಸರು ಬದಲಾವಣೆ ಸಾಧ್ಯತೆ ಬಲವಾಗಿ ಕಾಣಿಸುತ್ತಿದೆ. ಮಾರ್ಚ್ 28ರಂದು ಆರ್​​ಸಿಬಿ ಈ ಸೀಸನ್​​ನ ಮೊದಲ ಪಂದ್ಯ ಆಡಲಿದೆ. ಅದಕ್ಕೂ ಮೊದಲು ಮಾರಾಟ ವಹಿವಾಟು ನಡೆದಿದೆ.ಆರ್​​ಸಿಬಿ ಒಡೆತನವು ಈ ಮೊದಲು ಯುನೈಟೆಡ್‌ ಸ್ಪಿರಿಟ್ಸ್‌ ಲಿಮಿಟೆಡ್‌ (ಯುಎಸ್‌ಎಲ್‌) ಬಳಿ ಇತ್ತು.

ಈ ಕಂಪನಿಯು ಲಂಡನ್ ಮೂಲದ ಯುಕೆ–ಡಿಯಾಜಿಯೊದ ಅಂಗಸಂಸ್ಥೆಯಾಗಿದೆ. ಯುಎಸ್‌ಎಲ್‌ ಮದ್ಯ ತಯಾರಿಕಾ ಕಂಪನಿ. ಹೀಗಾಗಿ, ತಮ್ಮ ವಿಸ್ಕಿ ಬ್ರ್ಯಾಂಡ್ ರಾಯಲ್ ಚಾಲೆಂಜ್ ಅಥವಾ ಆರ್​​ಸಿ ಪ್ರಮೋಷನ್ ಮಾಡುವ ಉದ್ದೇಶದಿಂದ ರಾಯಲ್ ಚಾಲೆಂಜರ್ಸ್ ಎಂದು ತಂಡಕ್ಕೆ ಹೆಸರನ್ನು ಇಟ್ಟಿದ್ದರು ವಿಜಯ್ ಮಲ್ಯ.

ಈಗ ಐಪಿಎಲ್ ತಂಡ ಬೇರೆಯವರ ತೆಕ್ಕೆಗೆ ಹೋಗಿದೆ.

ರಾಯಲ್ ಚಾಲೆಂಜರ್ಸ್ ಬೆಂಗಳೂರು ಎಂಬ ಹೆಸರೇ ಇದ್ದರೆ ಈಗಲೂ ರಾಯಲ್ ಚಾಲೆಂಜ್ ಬ್ರ್ಯಾಂಡ್ ಪ್ರಮೋಷನ್ ಮಾಡಿದಂತೆ ಆಗುತ್ತದೆ. ಈ ಕಾರಣದಿಂದ ಆದಿತ್ಯ ಬಿರ್ಲಾ ಗ್ರೂಪ್ ಹೆಸರು ಬದಲಾವಣೆ ಮಾಡುವ ನಿರ್ಧಾರಕ್ಕೆ ಬರಬಹುದು.

ಈ ಮೊದಲು ಸಾಕಷ್ಟು ಐಪಿಎಲ್ ತಂಡಗಳ ಹೆಸರು ಬದಲಾದ ಉದಾಹರಣೆ ಇದೆ. ಸದ್ಯ ಆರ್​​ಸಿಬಿಯ ಪುರುಷ ಹಾಗೂ ಮಹಿಳಾ ತಂಡ ಎರಡನ್ನೂ ಆದಿತ್ಯ ಬಿರ್ಲಾ ಖರೀದಿ ಮಾಡಿದೆ.

Author