ಹೊಸನಗರ ತಾಲೂಕಿನ ರಿಪ್ಪನ್‌ಪೇಟೆಯ ಹೆದ್ದಾರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕೊಳವಳ್ಳಿ ಗ್ರಾಮದ ನಿವಾಸಿ ಸುನೀಲ್ (23) ಬುಧವಾರ ರಾತ್ರಿ ಮನೆಯಲ್ಲಿಯೇ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಮದ್ಯಪಾನ ವ್ಯಸನಿಯಾಗಿದ್ದ ಈತ ಮಾನಸಿಕ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ.
ರಿಪ್ಪನ್‌ಪೇಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



