ಶಾಸಕರಿಗೆ ಐಪಿಎಲ್ 3, ಅಂತಾರಾಷ್ಟ್ರೀಯ ಪಂದ್ಯದ 2 ಟಿಕೆಟ್ ನೀಡಲು KSCA ಒಪ್ಪಿಗೆ ; DCM ಡಿ.ಕೆ ಶಿವಕುಮಾರ್

ರಾಜಕೀಯ

ಬೆಂಗಳೂರು, ಕರ್ನಾಟಕದ ಶಾಸಕರು ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ನಡುವೆ ನಡೆದಿದ್ದ ಟಿಕೆಟ್ ಗೊಂದಲ ಕೊನೆಗೂ ಇತ್ಯರ್ಥವಾಗಿದ್ದು, ಹಾಲಿ ನಡೆಯುತ್ತಿರುವ ಐಪಿಎಲ್ ಟೂರ್ನಿಯಲ್ಲಿ ಶಾಸಕರಿಗೆ ಮೂರು ಟಿಕೆಟ್ ನೀಡಲು ಕೆಎಸ್ ಸಿಎ ನಿರ್ಧರಿಸಿದೆ ಎಂದು ಹೇಳಲಾಗಿದೆ.

ಕರ್ನಾಟಕದ ಶಾಸಕರು ಬಜೆಟ್ ಅಧಿವೇಶನದಲ್ಲಿ ಐಪಿಎಲ್ ಟಿಕೆಟ್ ಗೆ ಬೇಡಿಕೆ ಇಟ್ಟಿದ್ದು, ಭಾರೀ ಚರ್ಚೆಗೆ ಗ್ರಾಸವಾಗಿತ್ತು. ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ್ ಐಪಿಎಲ್ ಟಿಕೆಟ್ ನೀಡುವ ಬಗ್ಗೆ ಧ್ವನಿ ಎತ್ತಿದ್ದು, ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ಧ್ವನಿಗೂಡಿಸಿದ್ದು, ಭಾರೀ ವಿವಾದಕ್ಕೆ ಕಾರಣವಾಗಿತ್ತು.

ಇದರ ಮಧ್ಯೆ KSCA, DNA, RCB ಪದಾಧಿಕಾರಿಗಳ ಜೊತೆ ಡಿಸಿಎಂ ಡಿಕೆ ಶಿವಕುಮಾರ್ ಸಭೆ ನಡೆಸಿದ್ದು, ಚರ್ಚೆ ಬಳಿಕ ಮಹತ್ವದ ಘೋಷಣೆ ಮಾಡಿದ್ದಾರೆ.IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಅವರು ರಾಜ್ಯ ಕ್ರಿಕೆಟ್ ಅಸೋಸಿಯೇಷನ್ (KSCA), DNA ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಮ್ಯಾನೇಜ್ಮೆಂಟ್ ಪದಾಧಿಕಾರಿಗಳ ಜೊತೆ ಮಹತ್ವದ ಸಭೆ ನಡೆಸಿದ್ದು, ಸಭೆಯಲ್ಲಿ ಓರ್ವ ಶಾಸಕನಿಗೆ ಮೂರು ಐಪಿಎಲ್ ಟಿಕೆಟ್ ನೀಡಲು ತೀರ್ಮಾನವಾಗಿದೆ.

ಈ ಮೊದಲು 1 ಪ್ಲಸ್ 1 ಒಟ್ಟು ಎರಡು ಉಚಿತ ಟಿಕೆಟ್ ನೀಡಲು ತೀರ್ಮಾನಿಸಲಾಗಿತ್ತು. ಆದರೆ, ಇಂದಿನ ಸಭೆಯಲ್ಲಿ ಇನ್ನೊಂದು ಟಿಕೆಟ್ ಹೆಚ್ಚಳ ಮಾಡಲಾಗಿದ್ದು, ಅಂತಿಮವಾಗಿ ಒಬ್ಬ ಎಂಎಲ್​​ಎಗೆ ಒಟ್ಟು 3 ಟಿಕೆಟ್​​ಗಳನ್ನು ನೀಡಲು ಒಪ್ಪಂದವಾಗಿದೆ.

IPL ಟಿಕೆಟ್ ನೀಡುವಂತೆ ಸದನದಲ್ಲಿ ಶಾಸಕರು ಬೇಡಿಕೆ ಇಟ್ಟಿರುವ ಸಂಬಂಧ ಇಂದು (ಮಾರ್ಚ್ 30) ಬೆಂಗಳೂರಿನ ಸದಾಶಿವನಗರದ ಡಿಸಿಎಂ ಡಿಕೆ ಶಿವಕುಮಾರ್​​ ನಿವಾಸದಲ್ಲಿ ಮಹತ್ವದ ಸಭೆ ನಡೆದಿದ್ದು, ಸಭೆಯಲ್ಲಿ ಕೆಎಸ್ಸಿಎ ಅಧ್ಯಕ್ಷ ವೆಂಕಟೇಶ್ ಪ್ರಸಾದ್ ಮತ್ತು ಆರ್​ಸಿಬಿ ಪದಾಧಿಕಾರಿಗಳು ಭಾಗಿಯಾಗಿದ್ದು, ಐಪಿಎಲ್ ಟಿಕೆಟ್ ಹಾಗೂ ಸ್ಟೇಡಿಯಂ ಬಗ್ಗೆ ಮಹತ್ವದ ಚರ್ಚೆಯಾಗಿದೆ ಎನ್ನಲಾಗಿದೆ.

ಪ್ರತಿ ಮ್ಯಾಚ್​​ಗೆ 3 ಟಿಕೆಟ್

ಇಂದಿನ ಸಭೆಯ ತೀರ್ಮಾನದಂತೆ ಚಿನ್ನಸ್ವಾಮಿ ಸ್ಡೇಡಿಯಂನಲ್ಲಿ ನಡೆಯುವ ಪ್ರತಿ ಐಪಿಎಲ್ ಪಂದ್ಯದ ಮುರು ಟಿಕೆಟ್ ಹಾಗೂ ಇಂಟರ್​ ನ್ಯಾಷಲ್ ಮ್ಯಾಚ್​​ಗೆ ಎರಡು ಟಿಕೆಟ್ ನೀಡುವ ಕುರಿತು ತೀರ್ಮಾನವಾಗಿದೆ. ಈ ಹಿಂದಿನ ಸಭೆಯಲ್ಲಿ ಎರಡು ಟಿಕೆಟ್ ನೀಡುವ ಬಗ್ಗೆ ತೀರ್ಮಾನವಾಗಿತ್ತು. ಆದರೆ, ಇದೀಗ ಎರಡರ ಜೊತೆಗೆ ಮತ್ತೊಂದು ಹೆಚ್ಚುವರಿ ಟಿಕೆಟ್ ನೀಡಲು ನಿರ್ಧರಿಸಲಾಗಿದೆ.

ಡಿಕೆಶಿಗೆ ಆರ್​ಸಿಬಿ ಜರ್ಸಿ ಗಿಫ್ಟ್

ಕೆಎಸ್​​ಸಿಎ ವೆಂಕಟೇಶ್ ಪ್ರಸಾದ್ ಜೊತೆ ಆರ್​​ಸಿಬಿ ತಂಡದ ಸಿಇಒ ಸಹ ಡಿಕೆ ಶಿವಕುಮಾರ್ ಸಭೆಯಲ್ಲಿ ಹಾಜರಾಗಿದ್ದು, ಇದೇ ವೇಳೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಸಿಇಒ, ಡಿಕೆ ಶಿವಕುಮಾರ್​​​ಗೆ ಆರ್​​ಸಿಬಿ ಜರ್ಸಿ ಗಿಫ್ಟ್ ನೀಡಿದರು. ಇನ್ನು ಡಿಕೆ ಶಿವಕುಮಾರ್ ಜರ್ಸಿಯನ್ನು ಧರಿಸಿ ಫೋಟೋಗೆ ಪೋಸ್ ನೀಡಿದರು.

Author