ಶಿವಮೊಗ್ಗ | ಅಂಗಡಿಯಲಿದ್ದ ಸಿಲಿಂಡರ್ ಕಳ್ಳತನ

ಶಿವಮೊಗ್ಗ

ಶಿವಮೊಗ್ಗ ಜಿಲ್ಲೆಯ ಭದ್ರಾವತಿ ತಾಲೂಕಿನ ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕಳ್ಳರು ಅಂಗಡಿಯೊಂದಕ್ಕೆ ನುಗ್ಗಿ ಸಿಲಿಂಡರ್ ಕಳ್ಳತನ ಮಾಡಿರುವುದು ಬೆಳಕಿಗೆ ಬಂದಿದೆ.

ಏಪ್ರಿಲ್​​ 04 ರಂದು ಪೇಪರ್ ಟೌನ್ ಪೊಲೀಸ್ ಠಾಣಾ ವ್ಯಾಪ್ತಿಯ ಅಂಗಡಿಯೊಂದರಲ್ಲಿ ರಾತ್ರಿ ವೇಳೆ ಗ್ಯಾಸ್ ಸಿಲಿಂಡರ್ ಹಾಗೂ ಇತರೆ ಬೆಲೆಬಾಳುವ ವಸ್ತುಗಳನ್ನು ಕಳ್ಳತನ ಮಾಡಲಾಗಿದೆ.

ಈ ಕುರಿತು ದೂರುದಾರರು ತಕ್ಷಣವೇ 112 ಪೊಲೀಸರಿಗೆ ಫೋನ್​ ಮಾಡಿದ್ದಾರೆ. ದೂರು ಸ್ವೀಕರಿಸಿದ ಕೂಡಲೇ ಕಾರ್ಯಪ್ರವೃತ್ತರಾದ ಸಿಬ್ಬಂದಿಗಳು ಸ್ಥಳಕ್ಕೆ ಧಾವಿಸಿದ್ದಾರೆ.

ಸ್ಥಳ ಪರಿಶೀಲನೆ ನಡೆಸಿದ ಅಧಿಕಾರಿಗಳು, ದೂರುದಾರರಿಂದ ಮಾಹಿತಿ ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ.

ಪೊಲೀಸರು ಘಟನೆಯ ಸಂಪೂರ್ಣ ಮಾಹಿತಿಯನ್ನು ಸಂಬಂಧಪಟ್ಟ ಪೊಲೀಸ್ ಠಾಣೆಗೆ ವರ್ಗಾಯಿಸಿದ್ದು, ದೂರು ದಾಖಲಿಸಲು ಸೂಚಿಸಿದ್ದಾರೆ.

Author