ಶಿವಮೊಗ್ಗ | KSRTC ಬಸ್, ನಿಲ್ದಾಣದಲ್ಲಿ ಮುಂದುವರೆದ ಕಳ್ಳತನ

ಶಿವಮೊಗ್ಗ

ಶಿವಮೊಗ್ಗ, ಇಲ್ಲಿನ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದಲ್ಲಿ ಮಹಿಳೆಯೊಬ್ಬರ ಆಭರಣ ಕಳ್ಳತನವಾದ ಬಗ್ಗೆ ದೂರು ದಾಖಲಾಗಿದೆ.

ಸಾಗರಕ್ಕೆ ಹೊರಟಿದ್ದ ಮಹಿಳೆಯ ಪರ್ಸ್‌ನಲ್ಲಿದ್ದ 179 ಗ್ರಾಂ ಚಿನ್ನದ ಸರ ಹಾಗೂ 7 35 ಸಾವಿರ ನಗದನ್ನು ಕಳ್ಳರು ದೋಚಿದ್ದಾರೆ.

ಭದ್ರಾವತಿ ತಾಲ್ಲೂಕಿನ ಆನವೇರಿ ನಿವಾಸಿ ವಾಸಂತಿ ಏ. 4ರಂದು ಮಗಳೊಂದಿಗೆ ಶಿವಮೊಗ್ಗದಿಂದ ಸಾಗರಕ್ಕೆ ಹೊರಟಿದ್ದರು.

ಕೆಎಸ್‌ಆರ್‌ಟಿಸಿಬಸ್ ನಿಲ್ದಾಣದಲ್ಲಿ ಸಾಗರಕ್ಕೆ ತೆರಳುವ ಬಸ್ ಹತ್ತುವಾಗ ವಿಪರೀತ ಜನ ದಟ್ಟಣೆಯಿದ್ದು, ಅವರ ವ್ಯಾನಿಟಿ ಬ್ಯಾಗ್ ಒಳಗೆ ಮತ್ತೊಂದು ಪರ್ಸ್‌ನಲ್ಲಿ ಇಟ್ಟಿದ್ದ ಚಿನ್ನಾಭರಣ ಹಾಗೂ ನಗದು ಸೇರಿ 78,47 ಲಕ್ಷ ಮೌಲ್ಯದ ವಸ್ತುಗಳನ್ನು ಕಳವು ಮಾಡಿದ್ದಾರೆ.

ಬಸ್‌ನಲ್ಲಿ ಕಂಡಕ್ಟರ್ ಬಳಿ ಟಿಕೆಟ್ ತೆಗೆದುಕೊಳ್ಳುವಾಗ ಪರ್ಸ್ ಕಳ್ಳತನ ಆಗಿರುವುದು ವಾಸಂತಿ ಅವರ ಗಮನಕ್ಕೆ ಬಂದಿದೆ. ಈ ಬಗ್ಗೆ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Author