ಮೈಸೂರು,ಉದ್ಬುರು ಸರ್ಕಾರಿ ಶಾಲೆಯಲ್ಲಿ ಶಾಲೆಯಲ್ಲಿ ರಾಷ್ಟ್ರೀಯ ಆವಿಷ್ಕಾರ್ ಅಭಿಯಾನ್ ಕಾರ್ಯಕ್ರಮದ ಅಡಿಯಲ್ಲಿ 2025-26 ನೇ ಸಾಲಿನ ಶಾಲಾ ಹಂತದ ವಿಜ್ಞಾನ ವಸ್ತು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮವನ್ನು ಮುಖ್ಯಶಿಕ್ಷಕರು, ಸಹಶಿಕ್ಷಕರು, ನಮ್ಮ ಶಾಲೆಯ ವಿದ್ಯಾರ್ಥಿಗಳು ಮತ್ತು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಳೂರು ಇಲ್ಲಿಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಉಪಸ್ತಿತಿಯಲ್ಲಿ ಲಿಂಗರಾಜು, ಮುಖ್ಯಶಿಕ್ಷಕರು, ಸರ್ಕಾರಿ ಪ್ರೌಢ ಶಾಲೆ ಇವರು, ಉದ್ಘಾಟಿಸಿದರು.
ಉದ್ಘಾಟನಾ ಕಾರ್ಯಕ್ರಮವನ್ನು ರಾಸಾಯನಿಕ ಉಪಕರಣವನ್ನು ಉಪಯೋಗಿಸಿ ಬಣ್ಣ ಹಚ್ಚುವ ಹಾಗೂ ಟೇಪನ್ನು ಕತ್ತರಿಸುವ ಮೂಲಕ ವಿಭಿನ್ನವಾಗಿ ನೆರವೇರಿಸಲಾಯಿತು.

ಈ ವಸ್ತು ಪ್ರದರ್ಶನದಲ್ಲಿ ಒಟ್ಟು 40 ಮಾಡಲ್ ಗಳು ಹಾಗೂ 12 ಪ್ರಯೋಗಗಳನ್ನು ಪ್ರದರ್ಶಿಸಲಾಯಿತು. ಕಾರ್ಯಕ್ರಮದಲ್ಲಿ ಶಾಲೆಯ 8ನೇ, 9ನೇ ಮತ್ತು 10ನೇ ತರಗತಿಯ ಒಟ್ಟು 50 ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಈ ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಶಾಲೆಯ ಗಣಿತ ಮತ್ತು ವಿಜ್ಞಾನ ವಿಷಯ ಶಿಕ್ಷಕರು ಉತ್ತಮವಾದ ಮಾರ್ಗದರ್ಶನ ನೀಡುವುದರ ಜೊತೆಗೆ ಹೆಚ್ಚಿನ ಪರಿಶ್ರಮವನ್ನು ಹಾಕಿ ಮಕ್ಕಳನ್ನು ಪರಿಪೂರ್ಣವಾಗಿ ಸಿದ್ದಗೊಳಿಸಿರುತ್ತಾರೆ.
ಇದಲ್ಲದೆ ಈ ಕಾರ್ಯಕ್ರಮಕ್ಕೆ ಮುಖ್ಯ ಶಿಕ್ಷಕರು, ಸಹ ಶಿಕ್ಷಕರು, ಕಛೇರಿಯ ಸಿಬ್ಬಂದಿ ಮತ್ತು ಅಡುಗೆ ಸಿಬ್ಬಂದಿಗಳು ಕೂಡ ಸಹಕಾರ ನೀಡಿರುತ್ತಾರೆ.

ಈ ವಸ್ತು ಪ್ರದರ್ಶನವನ್ನು ವೀಕ್ಷಿಸಲು ಹತ್ತಿರದ ಶಾಲೆಗಳಾದ, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ, ತಳೂರು ಉದ್ದೂರು ಇಲ್ಲಿಯ ಶಿಕ್ಷಕರು ಮತ್ತು ವಿದ್ಯಾರ್ಥಗಳು ಭೇಟಿ ನೀಡಿ ಇದರ ಸದುಪಯೋಗವನ್ನು ಪಡೆದುಕೊಂಡಿರುತ್ತಾರೆ.
ಈ ಸಂದರ್ಭದಲ್ಲಿ ನಮ್ಮ ಶಾಲೆಯ ವಿದ್ಯಾರ್ಥಿಗಳು ಉತ್ತಮವಾಗಿ ವಿವರಣೆಯನ್ನು ನೀಡಿ, ಭೇಟಿ ನೀಡಿದ ವಿದ್ಯಾರ್ಥಿಗಳಲ್ಲಿದ್ದ ಸಂದೇಹಗಳನ್ನು ಪರಿಹರಿಸಿದರು. ಭೇಟಿ ನೀಡಿದ ವಿದ್ಯಾರ್ಥಿಗಳು ಮತ್ತು ಶಿಕ್ಷಕರು ನಮ್ಮ ವಿದ್ಯಾರ್ಥಿಗಳನ್ನು ಪ್ರಶಂಶಿಸಿ ಧನಾತ್ಮಕ ಹಿಮ್ಮಾಹಿತಿಯನ್ನು ನೀಡಿದರು.

ಈ ರೀತಿಯ ಕಾರ್ಯಕ್ರಮಗಳು ವಿದ್ಯಾರ್ಥಿಗಳ ಸರ್ವತೋಮುಖ ಬೆಳವಣಿಗೆಗೆ ಅಲ್ಲದೆ, ಅವರಲ್ಲಿ ಅಡಗಿರುವ ಸುಪ್ತ ಪ್ರತಿಭೆಯನ್ನು ಹೊರತರಲು ಹಾಗೂ ವೈಜ್ಞಾನಿಕ ಮನೋಭಾವನೆಯನ್ನು ಮೂಡಿಸಲು ಸಹಕಾರಿಯಾಗಿರುತ್ತದೆ ಎಂದು ತಿಳಿಸಿರುತ್ತಾರೆ.



