ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ ಶುಕ್ರವಾರ ರಾತ್ರೋರಾತ್ರಿ ನೆತ್ತರು ಹರಿದಿದೆ.ಯುವ ಕಾಂಗ್ರೆಸ್ ಮುಖಂಡ ಫೈರೋಜ್ ಪಠಾಣ್ ಎಂಬುವವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರಿಗೆ ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾರೆ.
ಯಾರು ಈ ಹತ್ಯೆ ಮಾಡಿದವರು ಎಂಬ ಸ್ಪಷ್ಟ ಮಾಹಿತಿ ಲಭ್ಯವಾಗಿಲ್ಲ. ರಾತ್ರೋರಾತ್ರಿ ಫೈರೋಜ್ ಅವರ ಮನೆಗೆ ನುಗ್ಗಿದ ದುಷ್ಕರ್ಮಿಗಳು ಅವರ ಮೇಲೆ ಚಾಕು ದಾಳಿ ನಡೆಸಿ ಪರಾರಿಯಾಗಿದ್ದಾರೆ.
ಕೂಡಲೇ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೇ ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಧಾರವಾಡ ಜಿಲ್ಲಾಸ್ಪತ್ರೆ ಎದುರು ದೊಡ್ಡಮಟ್ಟದಲ್ಲಿ ಜನ ಜಮಾಯಿಸಿದ್ದು, ಸ್ಥಳಕ್ಕೆ ವಿದ್ಯಾಗಿರಿ, ಉಪನಗರ ಹಾಗೂ ಶಹರ ಠಾಣೆಯ ಪೊಲೀಸರೂ ಭೇಟಿ ನೀಡಿದ್ದಾರೆ.


