ಶಿವಮೊಗ್ಗ ಜಿಲ್ಲಾ NSUI ವತಿಯಿಂದ ಇಂದು ಕುವೆಂಪು ವಿಶ್ವವಿದ್ಯಾಲಯದಲ್ಲಿ ಇತ್ತೀಚೆಗೆ ನಿರಂತರವಾಗಿ ವಿದ್ಯಾರ್ಥಿ ವಿರೋಧಿ ನಡೆ ಅನುಸರಿಸುತ್ತಿದ್ದು, ವಿದ್ಯಾರ್ಥಿಗಳ ಭವಿಷ್ಯದ ಜೊತೆಗೆ ಚೆಲ್ಲಾಟವಾಡುತ್ತಿರುವ ವಿಶ್ವವಿದ್ಯಾಲಯದ ನಡೆಯನ್ನು ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ಖಂಡಿಸುತ್ತಾ ಕುಲಪತಿಗಳು ಅಧಿಕಾರ ಸ್ವೀಕರಿಸಿದಂದಿನಿಂದಲೂ ವಿಶ್ವವಿದ್ಯಾಲಯದಲ್ಲಿ ಅಧಿಕಾರಿ ವರ್ಗದವರ ಆಂತರಿಕ ಕಚ್ಚಾಟದಲ್ಲೇ ತೊಡಗಿದ್ದಾರೆ ಎಂದು ಆರೋಪಿಸಿದೆ.
ವಿದ್ಯಾರ್ಥಿಗಳ ಭವಿಷ್ಯದ ಬಗ್ಗೆ ಕಾಳಜಿ ವಹಿಸುತ್ತಿಲ್ಲ. ಕಳೆದ 5 ತಿಂಗಳ ಹಿಂದೆ ಪರೀಕ್ಷೆ ಬರೆದಿದ್ದ 1,3 ಮತ್ತು 5ನೇ ಸೆಮಿಸ್ಟರ್‍ಗಳ ಫಲಿತಾಂಶ ಪ್ರಕಟಿಸಿಲ್ಲ.
ಇತ್ತೀಚೆಗೆ ನಡೆದ ಪರೀಕ್ಷೆಗಳ ಮೌಲ್ಯಮಾಪನವನ್ನು ಉಪನ್ಯಾಸಕರಿಗೆ ಮೌಲ್ಯಮಾಪನದ ಗೌರವಧನ ನೀಡದೇ ಇರುವುದರಿಂದ ಉಪನ್ಯಾಸಕರು ಮೌಲ್ಯಮಾಪನವನ್ನು ಬಹಿಷ್ಕರಿಸಿದ್ದಾರೆ.
ಅಲ್ಲದೇ 3 ವರ್ಷಗಳಿಂದ ಯಾವುದೇ ಪರೀಕ್ಷೆಗಳ ಅಂಕಪಟ್ಟಿಯನ್ನು ವಿತರಿಸದೇ ಅಂಕಪಟ್ಟಿಗಳನ್ನು ಮುದ್ರಿಸಲು ಟೆಂಡರ್ ಕರೆಯುವುದಾಗಿ ಹೇಳುತ್ತಲೇ ಬರಲಾಗುತ್ತಿದೆ.
ಇದರಿಂದಾಗಿ ಪದವಿ ಪೂರೈಸಿದ ವಿದ್ಯಾರ್ಥಿಗಳು ಮುಂದಿನ ವಿದ್ಯಾಭ್ಯಾಸಕ್ಕೆ ಹೋಗಲು, ಉದ್ಯೋಗ ಕಂಡುಕೊಳ್ಳಲು ಆಗುತ್ತಿಲ್ಲ. ಪದವಿ ಪೂರೈಸಿದ ವಿದ್ಯಾರ್ಥಿಗಳಿಗೆ ಪಾಸಿಂಗ್ ಸರ್ಟಿಫಿಕೇಟ್ ಅಥವಾ ಪದವಿ ಪ್ರಮಾಣ ಪತ್ರ ನೀಡುತ್ತಿಲ್ಲ.
ಬೇರೆ ಬೇರೆ ವಿಶ್ವವಿದ್ಯಾಲಯಗಳಲ್ಲಿ ನೀಡುವಂತೆ ಜಿನ್ಯುಯೆನ್ ಸರ್ಟಿಫಿಕೇಟ್ ಕೊಡದೇ ಇರುವುದರಿಂದಾಗಿ ಕುವೆಂಪು ವಿವಿಯಲ್ಲಿ ವ್ಯಾಸಂಗ ಮಾಡಿದವರಿಗೆ ವಿವಿಧ ಕಂಪನಿಗಳಲ್ಲಿ ಉದ್ಯೋಗ ಸಿಗುವುದು ಕಷ್ಟವಾಗುತ್ತಿದೆ ಎಂದು ಆರೋಪಿಸಿದೆ.
ವಿಶ್ವವಿದ್ಯಾಲಯದ ಆಂತರಿಕ ಕಚ್ಚಾಟದಿಂದಾಗಿ ಕಳೆದೆರಡು ವರ್ಷಗಳಿಂದ ಘಟಿಕೋತ್ಸವ ಸಮಾರಂಭವನ್ನು ಸಹ ಏರ್ಪಡಿಸದೇ ವಿವಿಯ ಮಾನ ಹರಾಜಿಗಿಡಲಾಗಿದೆ.
ಕಳೆದ ಬಾರಿ ವಿವಿಯ ವೆಬ್ ಸೈಟ್‍ನಲ್ಲಿ ಪ್ರಕಟಿಸಿದ್ದ ಫಲಿತಾಂಶ ಸಾಕಷ್ಟು ಗೊಂದಲಕ್ಕೀಡು ಮಾಡಿತ್ತು. ನೂರಾರು ವಿದ್ಯಾರ್ಥಿಗಳ ಫಲಿತಾಂಶ ಒಂದು ಬಾರಿ ಪಾಸ್ ಎಂದು ತೋರಿಸಿದ್ದರೆ ಮತ್ತೊಂದು ಬಾರಿ ಫೇಲ್ ಎಂದು ತೋರಿಸುತ್ತಿತ್ತು. ಇದರಿಂದಾಗಿ ವಿದ್ಯಾರ್ಥಿಗಳು ಗೊಂದಲಕ್ಕೀಡಿ ಆತಂಕಕ್ಕೊಳಗಾಗಿದ್ದಾರೆ.
ಕೂಡಲೇ ಕುಲಪತಿಗಳು ಮೌಲ್ಯಮಾಪನ ಬಹಿಷ್ಕರಿಸಿರುವ ಉಪನ್ಯಾಸಕರಿಗೆ ಕೊಡಬೇಕಾದ ಗೌರವಧನ ಪಾವತಿ ಮಾಡಿ ಮೌಲ್ಯಮಾಪನ ನಡೆಸಲು ಕ್ರಮ ಕೈಗೊಳ್ಳಬೇಕು. ಕಳೆದ 5 ತಿಂಗಳ ಹಿಂದೆ ನಡೆದಿದ್ದ 1, 3 ಮತ್ತು 5ನೇ ಸೆಮಿಸ್ಟರ್ ಪರೀಕ್ಷೆಗಳ ಫಲಿತಾಂಶ ಪ್ರಕಟಿಸಬೇಕು.
ಪದವಿ ಪ್ರಮಾಣ ಪತ್ರ, ಅಂಕಪಟ್ಟಿ, ಜೆನ್ಯೂಯೆನ್ ಸರ್ಟಿಫಿಕೇಟ್ ವಿತರಣೆ ಮಾಡಬೇಕು. ಆಂತರಿಕ ಕಚ್ಚಾಟದಲ್ಲಿ ತೊಡಗಿರುವ ಕುಲಪತಿಗಳು ಇನ್ನೆರಡು ದಿನಗಳಲ್ಲಿ ಈ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ನೀಡಬೇಕು.
ಇಲ್ಲದಿದ್ದರೆ ಶಿವಮೊಗ್ಗ ಜಿಲ್ಲಾ ಎನ್.ಎಸ್.ಯು.ಐ. ವತಿಯಿಂದ ತೀವ್ರ ಸ್ವರೂಪದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿ ಕುವೆಂಪು ವಿಶ್ವವಿದ್ಯಾನಿಲಯದ ಕುಲಸಚಿವರು ಮೌಲ್ಯಮಾಪನ ಇವರಿಗೆ ಮನವಿ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ NSUI ನ ಅಧ್ಯಕ್ಷರಾದ ವಿಜಯಕುಮಾರ್, ಕಾರ್ಯಧ್ಯಕ್ಷರಾದ ರವಿ-ಕಾರ್ಟಿಕೆರೆ, ರವಿ ಕುಮಾರ್, ವರುಣ್ ವಿ ಪಂಡಿತ್,ಆದಿತ್ಯ, ಸುಭಾನ್, ಪರಾಜ್, ಶ್ರೀಖಾಂತ್, ಕುಮಾರಸ್ವಾಮಿ, ಲೋಹಿತ್, ಆಕಾಶ್, ದರ್ಶನ್, ಇಸ್ಮೈಲ್, ರಿಜಿತ್,ಪ್ರಭು, ಪವನ್, ಪ್ರಮೋದ್ ಇನ್ನೂ ನೂರಾರು ಕಾರ್ಯಕರ್ತರು ಭಾಗಿಯಾಗಿದ್ದರು


