ದಾವಣಗೆರೆ | ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿ ಉಚ್ಛಾಟನೆ

ದಾವಣಗೆರೆ

ದಾವಣಗೆರೆ, ಪಂಚಮಸಾಲಿ ಪೀಠದಿಂದ ವಚನಾನಂದ ಸ್ವಾಮೀಜಿಯವರನ್ನು ಮಠದ ಟ್ರಸ್ಟಿಗಳು ಹೊರ ಹಾಕಿದ್ದಾರೆ. ಇಂದು ಮಠದಲ್ಲಿ ಟ್ರಸ್ಟಿಗಳು ನಡೆಸಿದ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.

ದಾವಣಗೆರೆ ಜಿಲ್ಲೆಯ ಹರಿಹರದ ಹನಗವಾಡಿ ಬಳಿಯ ಪಂಚಮಸಾಲಿ ಪೀಠದಲ್ಲಿ ನಡೆದ ಸಭೆಯಲ್ಲಿ 15 ಟ್ರಸ್ಟಿಗಳ ಪೈಕಿ 13 ಟ್ರಸ್ಟಿಗಳು ಭಾಗವಹಿಸಿ ನಿರ್ಣಯ ತೆಗೆದುಕೊಂಡು ಸ್ವಾಮೀಜಿಗಳನ್ನು ಮಠದ ಪೀಠದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ಟ್ರಸ್ಟಿ ಬಸವರಾಜ್ ದಿಂಡೂರು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

ಪಂಚಮಸಾಲಿ ಗುರುಪೀಠದ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಮಾತನಾಡಿ, ‘ಸ್ವಾಮೀಜಿಗಳನ್ನು ತೆಗೆದು ಹಾಕಲು ಸರ್ವ ಟ್ರಸ್ಟಿಗಳ ಸಭೆಯಲ್ಲಿ ತೀರ್ಮಾನ ಕೈಗೊಳ್ಳಲಾಗಿದೆ. ಸ್ವಾಮೀಜಿಗಳಿಗೆ ಒಂದು ನಿರ್ಣಯಕ್ಕೆ ಬನ್ನಿ ಎಂದು ಗಡುವು ನೀಡಿದ್ದೆವು. ನೀವು ಶ್ವಾಸ ಪೀಠದಲ್ಲಿ ಇರಬೇಕು ಇಲ್ಲವೇ ಹರಿಹರ ಪಂಚಮಸಾಲಿ ಪೀಠದಲ್ಲಿ ಇರಬೇಕು ಎಂದಿದ್ದೆವು.

ಸ್ವಾಮೀಜಿಗಳು ಗೌರವಯುತವಾಗಿ ಮಠವನ್ನು ಬಿಡಬೇಕು ಎಂದು ಮನವಿ ಮಾಡಲಾಗಿತ್ತು. ಈಗಾಗಲೇ ಮಾರ್ಚ್ 24ಕ್ಕೆ ನಿರ್ಣಯ ತೆಗೆದುಕೊಳ್ಳಲು ಅಂತಿಮ ಗಡುವು ನೀಡಿದ್ದೆವು.

ಆದರೆ, ಈ ಬಗ್ಗೆ ಅವರು ಯಾವುದೇ ಮಾಹಿತಿ ನೀಡಿದ ಕಾರಣ ಅವರನ್ನು ಪೀಠದಿಂದ ತೆಗೆದುಹಾಕುವ ನಿರ್ಣಯ ತೆಗೆದುಕೊಳ್ಳಲಾಗಿದೆ’ ಎಂದರು.

Author