ಶಿವಮೊಗ್ಗ ನಿರ್ದೇಶಕ ಸಂಗೀತ್ ಸಾಗರ್ ಅವರು ಕೊಪ್ಪ ತಾಲೂಕು ಹರಿಹರಪುರದಲ್ಲಿ ‘ಪಾತ್ರಧಾರಿʼ ಸಿನಿಮಾದ ಚಿತ್ರೀಕರಣ ನಡೆಯುತ್ತಿದ್ದ ವೇಳೆ ಧಿಡೀರ್ ಕುಸಿದು ಬಿದ್ದಿದ್ದರು.
ಕೂಡಲೆ ಅವರನ್ನು ಕೊಪ್ಪ ಆಸ್ಪತ್ರೆಗೆ ರವಾನಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗಾಗಿ ನಿರ್ದೇಶಕ ಸಂಗೀತ್ ಸಾಗರ್ ಅವರನ್ನು ಶಿವಮೊಗ್ಗದ ಮ್ಯಾಕ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಆದರೆ ಚಿಕಿತ್ಸೆಗೆ ಸ್ಪಂದಿಸದೆ ಕೊನೆಯುಸಿರೆಳೆದಿದ್ದಾರೆ.

ಸಂಗೀತ್ ಸಾಗರ್ ಅವರು ಮೂಲತಃ ಹಾಸನ ಜಿಲ್ಲೆ ಸಕಲೇಶಪುರದವರು. ಇವರಿಗೆ ಪತ್ನಿ ಮತ್ತು ಪುತ್ರಿ ಇದ್ದಾರೆ.
ಇಂದು ಸಂಜೆ ಸುಮಾರ್ 7 ರಿಂದ 7:30 ಗಂಟೆ ಸಮಯದಲ್ಲಿ CARDIAC ARREST ಆಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿದೆ.



