ಶಿವಮೊಗ್ಗ, ಮಹಾನಗರ ಪಾಲಿಕೆ ಆಯುಕ್ತ ಮಾಯಣ್ಣ ಗೌಡ.ಕೆ ಅವರ ಹೆಸರಿನಲ್ಲಿ ನಕಲಿ ವಾಟ್ಸಾಪ್ ಖಾತೆ ಸೃಷ್ಟಿಸಲಾಗಿದೆ ಎಂಬ ಮಾಹಿತಿಯಾಗಿದೆ.
ಪಾಲಿಕೆ ಆಯುಕ್ತ ಮಾಯಣ್ಣ ಗೌಡ ಅವರ ಭಾವಚಿತ್ರವನ್ನು ಕದ್ದು, ಸೈಬರ್ ವಂಚಕರು ವಿದೇಶಿ ಕೋಡ್ ಹೊಂದಿರುವ ಮೊಬೈಲ್ ಸಂಖ್ಯೆಗೆ ಡಿಪಿಯಾಗಿ ಬಳಸಿಕೊಂಡಿದ್ದರು.
ಆಯುಕ್ತರಂತೆ ನಟಿಸಿ ಪಾಲಿಕೆಯ ಇತರ ಅಧಿಕಾರಿಗಳಿಗೆ ಮೆಸೇಜ್ ಕಳುಹಿಸಿದ್ದಾರೆ. ಈ ಪ್ರಕರಣ ಏಪ್ರಿಲ್ 20ರಂದು ಬೆಳಕಿಗೆ ಬಂದಿದೆ.
ವಿಷಯ ಗಮನಕ್ಕೆ ಬರುತ್ತಿದ್ದಂತೆ ಎಚ್ಚೆತ್ತ ಪಾಲಿಕೆ ಆಯುಕ್ತರು, ಕೂಡಲೇ ದೂರು ನೀಡಿದ್ದಾರೆ.
ಘಟನೆ ಸಂಬಂಧ ಶಿವಮೊಗ್ಗದ ಸಿ.ಇ.ಎನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಾಹಿತಿ ತಂತ್ರಜ್ಞಾನ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


