ಬೆಂಗಳೂರು, ವರನಟ ಡಾ.ರಾಜ್ ಕುಮಾರ್ ಸಮಾಧಿಗೆ ಸರ್ಕಾರ ಜಾಗ ಕೊಟ್ಟಿದ್ದರ ಬಗ್ಗೆ ವಿವಾದಾತ್ಮಕ ಪೋಸ್ಟ್ ಮಾಡಿದ್ದ ನಟ ಚೇತನ್ ಅಭಿಮಾನಿಗಳ ಕ್ಷಮೆ ಕೇಳಿದ್ದಾರೆನನ್ನ ಹೇಳಿಕೆಯಿಂದ ಯಾರದಾದ್ರೂ ಮನಸ್ಸಿಗೆ ನೋವು ಆಗಿದ್ದರೆ ವಿಷಾದ ವ್ಯಕ್ತಪಡಿಸುತ್ತೇನೆ.
ಕ್ಷಮೆನೂ ಕೇಳುತ್ತೇನೆ, ಯಾರಿಗೂ ನೋವು ಮಾಡುವ ಉದ್ದೇಶ ನನಗಿರಲಿಲ್ಲ. ನಾನು ಸಹ ರಾಜ್ ಕುಮಾರ್ ಅಭಿಮಾನಿ ಎಂದಿದ್ದಾರೆ.
ನಟ ಚೇತನ್ ಫೇಸ್‍ಬುಕ್‍ನಲ್ಲಿ ಪೋಸ್ಟ್ ಮಾಡಿ ಸಮಾಧಿಗೆ 2.5 ಎಕರೆ ಜಾಗ ನೀಡಿದ್ದು ಸರಿನಾ? ಅಂತ ಪ್ರಶ್ನೆ ಮಾಡಿದ್ದರು.
21ನೇ ಶತಮಾನದಲ್ಲಿ ಪ್ರಮುಖ ಹೋರಾಟವೇ ಭೂಮಿಯಾಗಿದೆ. ಸರ್ಕಾರ ಅದನ್ನು ಗಮನದಲ್ಲಿಟ್ಟುಕೊಂಡು ಸಾರ್ವಜನಿಕರ ಉಪಯೋಗಕ್ಕೆ ಹಂಚಬೇಕು. ಮತಗಳ ಲಾಭದ ಉದ್ದೇಶದಿಂದ ಹಂಚಬಾರದು ಎಂದು ಪೋಸ್ಟ್ ಮಾಡಿದ್ದರು.

