ಶಿವಮೊಗ್ಗ | ಎಸ್‌ಎಸ್‌ಎಲ್‌ಸಿ ಅನುತ್ತೀರ್ಣ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆ-2 ಅವಕಾಶ : ಸಚಿವ ಎಸ್. ಮಧು ಬಂಗಾರಪ್ಪ

ಕರ್ನಾಟಕ

ಶಿವಮೊಗ್ಗ, 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1ರ ಫಲಿತಾಂಶದಲ್ಲಿ ಶೇ. 94.18ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗಿರುವುದಾಗಿ ತಿಳಿಸಿದ ಶಿಕ್ಷಣ ಸಚಿವ ಎಸ್. ಮಧು ಬಂಗಾರಪ್ಪ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಮತ್ತೊಂದು ಅವಕಾಶ ಒದಗಿಸಲು ಸರ್ಕಾರ ಮುಂದಾಗಿದೆ ಎಂದು ತಿಳಿಸಿದ್ದಾರೆ.

ಈ ಬಾರಿ ಸುಮಾರು 45,415 ವಿದ್ಯಾರ್ಥಿಗಳು ಅನುತ್ತೀರ್ಣರಾಗಿದ್ದು, ಇವರನ್ನು ಮುಂಬರುವ “ಪರೀಕ್ಷೆ-2”ಗೆ ಕಡ್ಡಾಯವಾಗಿ ನೋಂದಾಯಿಸಿ ಶೈಕ್ಷಣಿಕವಾಗಿ ಸಜ್ಜುಗೊಳಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ವಿದ್ಯಾರ್ಥಿ ನಿರಾಸೆಯಿಂದ ಶಿಕ್ಷಣವನ್ನು ನಿಲ್ಲಿಸಬಾರದು ಎಂಬುದು ಸರ್ಕಾರದ ಉದ್ದೇಶವಾಗಿದೆ ಎಂದು ಅವರು ಹೇಳಿದ್ದಾರೆ.

ವಿದ್ಯಾರ್ಥಿಗಳು ಮತ್ತು ಪೋಷಕರ ಮೇಲೆ ಆರ್ಥಿಕ ಭಾರ ಬಾರದಂತೆ, ಈ ಬಾರಿಯೂ ಪರೀಕ್ಷಾ ಶುಲ್ಕವನ್ನು ಸರ್ಕಾರವೇ ಭರಿಸಲಿದ್ದು, ಎಲ್ಲ ವಿದ್ಯಾರ್ಥಿಗಳಿಗೆ ಉಚಿತವಾಗಿ ಪರೀಕ್ಷೆಗೆ ಹಾಜರಾಗುವ ಅವಕಾಶ ಕಲ್ಪಿಸಲಾಗಿದೆ.

ಜೊತೆಗೆ, ಫಲಿತಾಂಶವನ್ನು ಸುಧಾರಿಸಿಕೊಳ್ಳಲು ಬಯಸುವವರಿಗೆ “ಇಂಪ್ರೂವ್ಮೆಂಟ್” ಅವಕಾಶವೂ ನೀಡಲಾಗಿದೆ.

Author