ಕುಂದಾಪುರ, ಜಿಲ್ಲೆಯ ಪ್ರಸಿದ್ದ ಪ್ರವಾಸಿ ತಾಣವಾದ ತ್ರಾಸಿಬೀಚ್ ಮುಂಭಾಗದ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಮುರುಡೇಶ್ವರದಿಂದ ಉಡುಪಿಯತ್ತ ಬರುತ್ತಿದ್ದ ಬಸ್ ರಸ್ತೆ ಬದಿ ನಿಂತಿದ್ದ ಲಾರಿಗೆ ಪ್ರವಾಸಿಗರಿದ್ದ ಮಿನಿ ಬಸ್ ವೇಗವಾಗಿ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಶಂಕಿಸಲಾಗಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ.ಬಸ್ ನಲ್ಲಿ ಸುಮಾರು 47 ಮಂದಿ ಪ್ರಯಾಣಿಸುತ್ತಿದ್ದರು ಎಂಬ ಮಾಹಿತಿಯಾಗಿದೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಮಿನಿ ಬಸ್‌ನಲ್ಲಿದ್ದ ಪ್ರವಾಸಿಗರು ಶಿವಮೊಗ್ಗ ಜಿಲ್ಲೆಯ ಭದ್ರಾವತಿ ಮೂಲದ ಶಂಕರಘಟ್ಟ ರಂಭಾಪುರಿ ಕಾಲೇಜಿನ ಬಿಕಾಂ ವಿದ್ಯಾರ್ಥಿಗಳು, ಕರಾವಳಿ ಭಾಗಕ್ಕೆ ಪ್ರವಾಸಕ್ಕೇಂದು ವಿದ್ಯಾರ್ಥಿಗಳು ಬಂದಿದ್ದರು ಎಂದು ತಿಳಿದುಬಂದಿದೆ.
ಗಾಯಾಳುಗಳನ್ನು ತಕ್ಷಣವೇ ಸ್ಥಳೀಯರು ಹಾಗೂ ಪೊಲೀಸರು ಸಮೀಪದ ಆಸ್ಪತ್ರೆಗಳಿಗೆ ಸಾಗಿಸಿದ್ದಾರೆ. ಹೆಚ್ಚಿನ ಗಾಯಾಳುಗಳನ್ನು ಕುಂದಾಪುರದ ಖಾಸಗಿ ಆಸ್ಪತ್ರೆಗಳಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

