ಮೈಸೂರು | ಯುವತಿಯನ್ನ ಪ್ರೀತಿಸಿ ಕೈ ಕೊಟ್ಟ ಕಾಂಗ್ರೆಸ್ ಮುಖಂಡ?

ಮೈಸೂರು

ಮೈಸೂರು, ಟಿ ನರಸೀಪುರದ ಕಾಂಗ್ರೆಸ್‌ ಮುಖಂಡ ಮದನ್‌ ರಾಜ್‌ ವಿರುದ್ಧ ಪ್ರೀತಿ ಹೆಸರಲ್ಲಿ ವಂಚಿಸಿದ ಆರೋಪ ಕೇಳಿ ಬಂದಿದೆ.

ಈ ಬಗ್ಗೆ ಟಿ ನರಸೀಪುರ ಪೊಲೀಸ್‌ ಠಾಣಿಯಲ್ಲಿ ಯುವತಿ ದೂರು ನೀಡಿದ್ದಾರೆ. ದೂರಿನಲ್ಲಿ, ಮದನ್‌ ರಾಜ್‌ ಬಲವಂತವಾಗಿ ದೈಹಿಕ ಸಂಪರ್ಕ ಬೆಳೆಸಿದ್ದಾರೆ.

ಆತನ ಜೊತೆ ನಾನಿದ್ದ ಫೋಟೋಗಳಿರುವ ಮೊಬೈಲ್‌ಗಳನ್ನು ನನ್ನಿಂದ ಕಿತ್ತುಕೊಂಡಿದ್ದಾರೆ. ಅಲ್ಲದೇ ಮದುವೆಗೆ ಒತ್ತಾಯಿಸಿದಾಗ, ಇಬ್ಬರು ವಿಷ ಕುಡಿಯೋಣ ಎಂದು ನನಗೆ ಮಾತ್ರ ವಿಷ ಕೊಟ್ಟು ಕೊಲೆಗೆ ಯತ್ನಿಸಿದ್ದರು. ಈಗ ಮತ್ತೊಬ್ಬ ಯುವತಿ ಜೊತೆ ಎಂಗೇಜ್‌ಮೆಂಟ್‌ ಮಾಡಿಕೊಂಡಿದ್ದಾರೆ ಎಂದು ಉಲ್ಲೇಖಿಸಿದ್ದಾಳೆ.

ಈ ಸಂಬಂಧ ಮದನ್ ರಾಜ್ ಪತ್ತೆಗೆ ಪೊಲೀಸರು ಬಲೆ ಬೀಸಿದ್ದು, ಹುಡುಕಾಟ ನಡೆಸುತ್ತಿದ್ದಾರೆ.

Author