ಶಿವಮೊಗ್ಗ | ಕುಂಸಿಯ ಯುವಕನಿಗೆ 20 ವರ್ಷ ಶಿಕ್ಷೆ

ಶಿವಮೊಗ್ಗ

ಶಿವಮೊಗ್ಗ , ಬಾಲಕಿಯೋರ್ವಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಯುವಕನೋರ್ವನಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ ವಿಧಿಸಿ, ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ (ಎಫ್’ಟಿಎಸ್’ಸಿ-1) ತೀರ್ಪು ನೀಡಿದೆ.

30 ವರ್ಷದ ಯುವಕನೇ ಜೈಲು ಶಿಕ್ಷೆಗೆ ಗುರಿಯಾದ ಅಪರಾಧಿಯಾಗಿದ್ದಾನೆ. ಜೈಲು ಶಿಕ್ಷೆಯ ಜೊತೆಗೆ 2 ಲಕ್ಷ ರೂ. ದಂಡ ಕೂಡ ವಿಧಿಸಲಾಗಿದೆ.

ನೊಂದ ಬಾಲಕಿಗೆ 1.80 ಸಾವಿರ ರೂ. ಪರಿಹಾರ ನೀಡುವಂತೆ ನ್ಯಾಯಾಲಯ ಆದೇಶಿಸಿದೆ.

ನ್ಯಾಯಾಧೀಶ ನಿಂಗನಗೌಡ ಭ ಪಾಟೀಲ್ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕ ಶ್ರೀಧರ್ ವಾದ ಮಂಡಿಸಿದ್ದರು.

ಪ್ರಕರಣದ ಹಿನ್ನೆಲೆ :

2022 ನೇ ಸಾಲಿನಲ್ಲಿ 17 ವರ್ಷದ ಯುವತಿಗೆ, ಅಪರಾಧಿಯು ಲೈಂಗಿಕ ದೌರ್ಜನ್ಯ ಎಸಗಿದ್ದ. ಈ ಕುರಿತಂತೆ ಕುಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಅಂದಿನ ಇನ್ಸ್’ಪೆಕ್ಟರ್ ತಿಪ್ಪೇಸ್ವಾಮಿ ಪ್ರಕರಣದ ತನಿಖೆ ನಡೆಸಿ, ನ್ಯಾಯಾಲಯಕ್ಕೆ ಆರೋಪಪಟ್ಟಿ ದಾಖಲಿಸಿದ್ದರು.

Author